ಸುಭದ್ರ ಬದುಕು ಕಟ್ಟಿಕೊಳ್ಳಲು ಹೊಲಿಗೆ ಯಂತ್ರಗಳು ನೆರವಾಗಲಿ ಕಮಲಾ ಗುಮಾಸ್ತೆ
ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ
ಬೇವಿನಹಳ್ಳಿ : ಶಹಪುರ ಹಾಗೂ ಹಿಟ್ನಾಳ್ ಗ್ರಾಮದ ಮಹಿಳೆಯರಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಈ ಹೊಲಿಗೆ ಯಂತ್ರಗಳು ನೆರವಾಗಲಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತರರಿಗೂ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಕಿರ್ಲೋಸ್ಕರ್ ಲೇಡೀಸ್ ಕ್ಲಬ್ ನ ಅಧ್ಯಕ್ಷೆ ಕಮಲಾ ಗುಮಾಸ್ತೇ ಹೇಳಿದರು.
ಅವರು ಇಂದು ಹಿಟ್ನಾಳ್ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀಮತಿ ಕಸ್ತೂರಿ ಅವರು ಮಹಿಳೆಯರಿಗೆ ಹೊಲಿಗೆ ತರಬೇತಿಯನ್ನು ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತರಬೇತಿ ಪಡೆದಂತಹ ಮಹಿಳೆಯರಿಗೆ ನಮ್ಮ ಕಿರ್ಲೋಸ್ಕರ್ ಪೆರಸ್ ಇಂಡಸ್ಟ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ವತಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಇದು ಅವರ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜು ಬಂಡಿಹಾಳ ಮಾತನಾಡಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಇದೇ ರೀತಿಯಾಗಿ ಸಹಕಾರ ಮುಂದುವರಿಯಲಿ ಎಂದು ಆಶಿಸಿದರು.
ಇದೆ ಸಂದರ್ಭದಲ್ಲಿ ತರಬೇತಿ ಪಡೆದಿದ್ದ 11 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಘಂಡ ಮಾರುತಿ, ತರಬೇತಿದಾರಾದ ಶ್ರೀಮತಿ ಕಸ್ತೂರಿ, ಕಿರ್ಲೋಸ್ಕರ್ ಲೇಡೀಸ್ ಕ್ಲಬ್ ನ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
Comments are closed.