ಪ್ರಕಾಶ ಜಡಿಯವರಗೆ ಪಿಎಚ್.ಡಿ
ಕೊಪ್ಪಳ : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶ.ಚ. ಜಡಿಯವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.
“ಹೈದರಾಬಾದ್ ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಸ್ಥಿತಿಗತಿ” ಎಂಬ ವಿಷಯದ ಮೇಲೆ ಮಹಾಪ್ರಬಂಧವನ್ನು ಸಲ್ಲಿಸಿದ್ದರು. ಇವರಿಗೆ ಮಾರ್ಗದರ್ಶಕರಾಗಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರಾದ ಡಾ. ಗಣಪತಿ ಕೆ ಲಮಾಣಿ ಮಾರ್ಗದರ್ಶನ ನೀಡಿದ್ದರು.
Comments are closed.