ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

0

Get real time updates directly on you device, subscribe now.

ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 17 ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡು ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
ಅಕ್ಟೋಬರ್ 5ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 17 ರಂದು ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಂದು ನಗರದ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಶುಚಿತ್ವ ಕಾರ್ಯವಾಗಬೇಕು. ಸುರಕ್ಷತೆ ದೃಷ್ಟಿಯಿಂದ ಮೆರವಣಿಗೆ ವೇಳೆ ಪೊಲೀಸ್ ಭದ್ರತೆ ಒದಗಿಸಬೇಕು. ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯು ಒದಗಿಸಬೇಕು ಎಂದು ಸೂಚನೆ ನೀಡಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಕಲಾವಿದರಿಂದ ಸುಗಮ ಸಂಗೀತ ಮತ್ತು ಉಪನ್ಯಾಸ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕು ಎಂದು ತಿಳಿಸಿದರು.
ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರ ಅಗತ್ಯವಾಗಿದೆ. ಸಮಾಜದ ಬಂಧುಗಳು ಸೇರಿದಂತ ಎಲ್ಲಾ ಸಮುದಾಯದ ಜನರು ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಸಭೆಯ ಮೂಲಕ ಮನವಿ ಮಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜು ತಳವಾರ ಅವರು ಮಾತನಾಡಿ, ಅಕ್ಟೋಬರ್ 17ರಂದು ಬೆಳಿಗ್ಗೆ 8.30ಕ್ಕೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆಯು ಶ್ರೀ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯಭವನದವರೆಗೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಇರುತ್ತದೆ. ಕಾರ್ಯಕ್ರಮದ ವಿಡಿಯೋ ಚಿತ್ರೀಕರಣ, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ಸಮಾಜದ ಗಣ್ಯರಿಗೆ ಸನ್ಮಾನದ ವ್ಯವಸ್ಥೆ ಸೇರಿದಂತೆ ಸಭೆಯಲ್ಲಿ ಚರ್ಚಿಸಿದಂತೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀಶೈಲ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಗದೀಶ ಜೆ.ಹೆಚ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಾರದ ಕೊಟ್ರೇಶ ಮರಬನಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರಾದ ರಾಮಣ್ಣ ಕಲ್ಲನ್ನವರ, ರಾಮಣ್ಣ ಚವಡಕಿ, ಚನ್ನಪ್ಪ ತಳವಾರ, ಮಾರ್ಕಂಡೇಶ್ವರ ಕಲ್ಲಣ್ಣನವರ, ಬಸವರಾಜ ಶಹಾಪುರ, ಕೆ.ಎನ್.ಪಾಟೀಲ, ಶರಣಪ್ಪ ನಾಯ್ಕರ, ಸುರೇಶ ಡೊಣ್ಣಿ, ಜೋಗದ ನಾರಾಯಣಪ್ಪ, ಜೋಗದ ಹನುಮಂತಪ್ಪ, ವೀರಭದ್ರಪ್ಪ ನಾಯಕ, ಶೇಖಣ್ಣ ಇಂದ್ರಗಿ, ಬಸನಗೌಡ ಪೋಲಿಸ್‌ಪಾಟೀಲ್ ಸೇರಿದಂತೆ ಇನ್ನೀತರರು ಇದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!