ವಿದ್ಯಾರ್ಥಿನಿಯರಿಗೆ ಹಿಮೋಗ್ಲೋಬಿನ್ ತಪಾಸಣಾ ಶಿಬಿರ
: ಯುವರೆಡ್ ಕ್ರಾಸ್ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಲಯ ಕೊಪ್ಪಳ ಇವರ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗೆ ಹಿಮೋಗ್ಲೋಬಿನ್ ತಪಾಸಣಾ ಶಿಬಿರವು ಅಕ್ಟೋಬರ್ 05ರಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಕೆ. ಲಮಾಣಿ ಅವರು ಮಾತನಾಡಿ ವಿದ್ಯಾರ್ಥಿನೀಯರು ಸರಿಯಾದ ಸಮಯಕ್ಕೆ ಆಹಾರ ಸೇವಿಸದೆ ಇರುವುದರಿಂದ ಅವರಲ್ಲಿ ಹಿಮೋಗ್ಲೋಬಿನ್ ಕಡಿಮೆ ಆಗುತ್ತದೆ. ಆದ್ದರಿಂದ ಎಲ್ಲರೂ ಪೌಸ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು..
ಯುವರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ ಪ್ರದೀಪ್ ಕುಮಾರ್ ಯು ಅವರು ಮಾತನಾಡಿ ನಮ್ಮ ಕಾಲೇಜಿನಲ್ಲಿ ಪ್ರತೀ ವರ್ಷ ವಿದ್ಯಾರ್ಥಿನೀಯರಿಗೆ ಹಿಮೋಗ್ಲೊಬಿನ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗುತ್ತದೆ. ಮುಂದುವರೆದು ಅತ್ಯಂತ ಕಡಿಮೆ ಹಿಮೋಗ್ಲೊಬಿನ್ ಇರುವ ವಿದ್ಯಾರ್ಥಿನೀಯರಿಗೆ ಮೂರು ತಿಂಗಳ ಫರೆಸ್ ಸಲ್ಫೇಟ್ ಮತ್ತು ಫೋಲಿಕ್ ಆಸಿಡ್ ಮಾತ್ರೆಗಳನ್ನು ನೀಡಿ ಮೂರು ತಿಂಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಿ ಅವರ ಹಿಮೋಗ್ಲೊಬಿನ್ ಪ್ರಮಾಣವನ್ನು ಪರೀಕ್ಷಿಸಲಾಗುವುದು. ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಯವರು ಪರೀಕ್ಷೆಗೆ ಒಳಪಡುವುದರ ಮೂಲಕ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಪ್ರಯೋಗಾಲಯದ ತಂತ್ರಜ್ಞರಾದ ಸಂತೋಷ, ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಉದಯ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಚೌಡಮ್ಮ, ಕಾಲೇಜಿನ ಸಹ ಪ್ರಾದ್ಯಾಪಕರಾದ ಡಾ ಹುಲಿಗೆಮ್ಮ ಬಿ, ಡಾ.ನರಸಿಂಹ ಸೇರಿದಂತೆ ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
Comments are closed.