ಅ. 08ರಂದು ಹನುಮನಾಳ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ

Get real time updates directly on you device, subscribe now.

ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ತಾಲ್ಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮವನ್ನು ಅಕ್ಟೋಬರ್ 08ರ ಮಂಗಳವಾರದಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ “ಜನ ಸ್ಪಂದನಾ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲು ತಿಳಿಸಿದಂತೆ, “ಜನ ಸ್ಪಂದನಾ” ಕಾರ್ಯಕ್ರಮವನ್ನು ಕುಷ್ಟಗಿ ತಾಲ್ಲೂಕಿನ ಹನುಮನಾಳ ಗ್ರಾಮದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದ ಮುಂಭಾಗದಲ್ಲಿ ಅಕ್ಟೋಬರ್ 08ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಆಯೋಜಿಸಲಾಗಿರುತ್ತದೆ.

ಈ “ಜನ ಸ್ಪಂದನಾ” ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪ್ರಕಟಣೆ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!