ಅ.16ರಂದು ಒಳ ಮೀಸಲಾತಿ ಜಾರಿಗಾಗಿ ಬೃಹತ್ ಪ್ರತಿಭಟನೆ : ಬಿ. ಹುಸೇನಪ್ಪ ಸ್ವಾಮಿ
ಕೊಪ್ಪಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಒಳ ಮೀಸಲಾತಿ ಜಾರಿಗಾಗಿ ರಾಜ್ಯದಾದ್ಯಂತ ಅಕ್ಟೋಬರ್ 16ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಿ. ಹುಸೇನಪ್ಪ ಸ್ವಾಮಿ ಮಾದಿಗ ಹೇಳಿದರು.
ಅವರು ಸೋಮವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಪರಿಶಿಷ್ಟ ಜಾತಿಗಳಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅತಿ ಹೆಚ್ಚು ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಯ ಸದುದ್ದೇಶದಿಂದ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು ಒಳ ಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ಸಾಂವಿಧಾನಿಕ ಪೂರ್ಣ ಪೀಠವು ತೀರ್ಪು ನೀಡಿದೆ, ಪರಿಶಿಷ್ಟ ಜಾತಿಗಳ ಸಾಮಾಜಿಕವಾಗಿ ಏಕರೂಪಿಯಾಗಿಲ್ಲ ಎಂದು ಏಳು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಹೇಳಿದೆ, ರಾಜ್ಯ ಸರ್ಕಾರಗಳು ಸಾಮಾಜಿಕ,ಆರ್ಥಿಕವಾಗಿ ಹಿಂದುಳಿದಿರುವಿಕೆ ಗುರುತಿಸಿಕೊಂಡು ಮೀಸಲಾತಿ ಯಂತಹ ವಿಶೇಷ ಅವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರಗಳು ಮುಕ್ತವಾಗಿದೆ ಎಂದು ಸಿಜೆಐರವರು ತೀರ್ಪಿನಲ್ಲಿ ಹೇಳಿದ್ದಾರೆ, ಪರಿಶಿಷ್ಟ ಜಾತಿಗಳು ಏಕರೂಪಿ ಸಮುದಾಯವು ಅಲ್ಲ ಎಂಬುದನ್ನು ಐತಿಹಾಸಿಕ ಮತ್ತು ಅನುಭವಕ್ಕೆ ದಕ್ಕುವ ಸಾಕ್ಷಿಗಳು ಹೇಳುತ್ತವೆ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯ ದತ್ತಾಂಶಗಳನ್ನು ಪರಿಗಣಿಸಿ ನ್ಯಾಯಮೂರ್ತಿ ಅಡಿಗ ರವರ ಸಲಹೆಯಂತೆ ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿಯು ಕಾನೂನು ಬದ್ಧವಾಗಿ ಒಟ್ಟು ಶೇ.17% ರ ಮೀಸಲಾತಿಯಲ್ಲಿ ಪರಿಶಿಷ್ಟರಲ್ಲಿರುವ ಆಯಾ ಜಾತಿ ಸಂಬಂಧಿತ ಜಾತಿಗಳ ನಾಲ್ಕು ಗುಂಪು ಮಾಡಿ ಅವರವರ ಜಾತಿ ಜನಸಂಖ್ಯೆ ಆಧಾರವಾಗಿ ಒಳ ಮೀಸಲಾತಿಗೆ ಶಿಫಾರಸು ಮಾಡಿದೆ, ಸುಪ್ರೀಂ ಕೋರ್ಟು ತೀರ್ಪನ್ನು ಕೂಡಲೆ ರಾಜ್ಯ ಸರ್ಕಾರವು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಡಿ.ಹುಲ್ಲೇಶ್ ಬೂದುಗುಂಪ, ಸಂಚಾಲಕ ಸಿದ್ದೇಶ್ ಪೂಜಾರ ದದೆಗಲ್,ಮುಖಂಡರಾದ ಮೈಲಪ್ಪ ಹೊಸಮನಿ, ಮಾರುತಿ,ಪಕೀರಪ್ಪ ಮೆಳ್ಳಿಕೇರಿ ಉಪಸ್ಥಿತರಿದ್ದರು.
Comments are closed.