ಓಜನಹಳ್ಳಿಯಲ್ಲಿ ಮನೆ ಮನೆ ಭೇಟಿ: ನರೇಗಾ ಯೋಜನೆಯ ಜಾಗೃತಿ

Get real time updates directly on you device, subscribe now.

ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನ
ಕೊಪ್ಪಳ  ): ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತಿಯಿAದ ಗ್ರಾಮದಲ್ಲಿ ಅಕ್ಟೋಬರ್ 5ರಂದು ವಿಶಿಷ್ಟ ಕಾರ್ಯಕ್ರಮ ನಡೆಯಿತು.
2025-26ನೇ ಸಾಲಿನ ಮಹಾತ್ಮಾಗಾಂಧಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಕುರಿತು ನವೆಂಬರ್-30ರವರೆಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ, ಐಇಸಿ ಕಾರ್ಯಕ್ರಮದ ಮೂಲಕ ಯೋಜನೆಯ ಜಾಗೃತಿ, ಕಾಮಗಾರಿಗಳ ಬೇಡಿಕೆ ಸ್ವೀಕಾರ ನಿಮಿತ್ತ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು.
ಗ್ರಾಮಸ್ಥರಿಗೆ ಯೋಜನೆಯ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ಮನೆಮನೆ ಭೇಟಿ ಸಂದರ್ಭದಲ್ಲಿ ರೈತರು, ಮಹಿಳೆಯರಿಂದ ದನದ ಶೆಡ್, ಕುರಿಶೆಡ್, ಬದು ನಿರ್ಮಾಣ, ತೆಂಗು, ಲಿಂಬೆ ಸೇರಿದಂತೆ ಒಟ್ಟು 35 ವೈಯಕ್ತಿಕ ಕಾಮಗಾರಿಗಳು, 01 ಎನ್‌ಆರ್‌ಎಲ್‌ಎಂ ಶೆಡ್ ನಿರ್ಮಾಣ ಕಾಮಗಾರಿಗಳ ಬೇಡಿಕೆಯನ್ನು ಗ್ರಾಮ ಕಾಯಕ ಮಿತ್ರ ಮೆಹಬೂಬಿ ಅವರು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಕರವಸೂಲಿಗಾರ ರಾಘವೇಂದ್ರ, ಡಿಇಒ ಬಸವರಾಜ ಭಾಗಿಯಾಗಿದ್ದರು.
ಇದೆ ವೇಳೆ ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ ಮಾತನಾಡಿ, ಮಹಾತ್ಮಾ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ರೈತರ, ಕೂಲಿಕಾರರ, ಮಹಿಳೆಯರ ಸಬಲತೆಗಾಗಿ ಜಾರಿಯಾದ ಯೋಜನೆಯಾಗಿದ್ದು 100 ದಿನಗಳ ಕೆಲಸವನ್ನು ನಿರ್ವಹಿಸಬಹುದಾಗಿದೆ ಎಂದರು.
ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನ ನಡೆಯುತ್ತಿದೆ. ನರೇಗಾ ಯೋಜನೆಯ ಮಾಹಿತಿ, ಕಾಮಗಾರಿಗಳ ಕುರಿತು ಮನೆಮನೆ ಭೇಟಿ ಮೂಲಕ ಕುಟುಂಬಗಳಿಗೆ ಮಾಹಿತಿ ನೀಡಿ ಯೋಜನೆಯಡಿ ಗ್ರಾಮ ಪಂಚಾಯತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ ಇರುತ್ತದೆ ಎಂದರು.
ಮೊದಲು ಯಾವ ಕಾಮಗಾರಿಯು ಅನುಷ್ಠಾನವಾಗಬೇಕು ಎಂಬುದನ್ನು ಆಯ್ಕೆ ಮಾಡಿ ನಮೂನೆಯಲ್ಲಿ ಭರ್ತಿ ಮಾಡಿ ಸಹಿಯೊಂದಿಗೆ ಸಲ್ಲಿಸಬೇಕು. ಬರುವ ದಿನಗಳಲ್ಲಿ ಗ್ರಾಮ ಪಂಚಾಯತಿಯ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಕಾಮಗಾರಿಗಳನ್ನು ಸೇರ್ಪಡೆ ಮಾಡಲಾಗುತ್ತದೆ ಎಂದರು.
ಸ್ವಸಹಾಯ ಸಂಘದ ಮಹಿಳೆಯರಿಗೆ ಮಾಹಿತಿ ನೀಡಿ ಕಾಮಗಾರಿ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ನರೇಗಾ ಯೋಜನೆಯ ಕಾಮಗಾರಿಯಿಂದ ಕುಟುಂಬಕ್ಕೆ ಒಂದು ಆರ್ಥಿಕ ಬೆನ್ನೆಲುಬಾಗಿ ನಿಲ್ಲಲು ಸಹಕಾರಿಯಾಗುತ್ತದೆ ಎಂದರು.
ಮಹಾತ್ಮಾ ಗಾಂಧಿ ನರೇಗಾದಡಿ ವೈಯಕ್ತಿಕ ಕಾಮಗಾರಿಗಳಾದ ಜಾನುವಾರ ಶೆಡ್, ಮೆಕೆಶೆಡ್, ಕೃಷಿ ಹೊಂಡ, ಕೋಳಿಶೆಡ್, ಹಂದಿಶೆಡ್, ಬದು ನಿರ್ಮಾಣ ಕಾಮಗಾರಿ ಅನುಷ್ಠಾಗೊಳಿಸಲು ಅವಕಾಶ ಇರುತ್ತದೆ ಎಂದರು. ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ಗ್ರಾಮದಲ್ಲಿ ಮನೆ ಮನೆ ಭೇಟಿ ಮೂಲಕ ಯೋಜನೆಯ ಜಾಗೃತಿ ಮೂಡಿಸಿ ಯೋಜನೆಯಡಿ ಇರುವ ಅವಕಾಶಗಳ ಕುರಿತು ಮನವರಿಕೆ ಮಾಡಿದ ನಂತರ ಗ್ರಾಮ ಪಂಚಾಯತಿ ಹಾಗು ಅನುಷ್ಠಾನ ಇಲಾಖೆಯ ಕಾಮಗಾರಿಗಳ ಬೇಡಿಕೆ ಪಡೆದ ಮೇಲೆ ಪ್ರತಿ ಗ್ರಾಮದಲ್ಲಿ ಜರುಗುವ ವಾರ್ಡ ಸಭೆ, ಗ್ರಾಮಸಭೆಯಲ್ಲಿ ಅನುಮೋದನೆ ಪಡೆದು 2025-26ನೇ ಸಾಲಿನ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ ಜಿಲ್ಲಾ ಪಂಚಾಯತಿಯಿAದ ಅನುಮೋದನೆ ಪಡೆಯಲಾಗುತ್ತದೆ ಎಂದರು.

Get real time updates directly on you device, subscribe now.

Comments are closed.

error: Content is protected !!