ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ

Get real time updates directly on you device, subscribe now.

 ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವದೇ ದತ್ತು ಗ್ರಾಮದ ಉದ್ದೇಶವಾಗಿದೆಂದು ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಪ್ರಕಾಶ ವಡ್ಡರ ಅವರು ಹೇಳಿದರು.
ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 09ರಂದು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮ ಅಭಿವೃದ್ಧಿಗಾಗಿ ಆಯ್ಕೆ ಮಾಡಿರುವ ಕುರಿತು ಗ್ರಾಮಸ್ಥರೊಂದಿಗೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಇತ್ತೀಚಿಗೆ ಸಂಸದರ ಅಧ್ಯಕ್ಷತೆಯಲ್ಲಿ ಜರುಗಿದ ದಿಶಾ ಸಭೆಯಲ್ಲಿ ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯತಿಯ ಕಾಮನೂರು ಗ್ರಾಮ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿಯ ಮೋರನಾಳ ಗ್ರಾಮಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಗ್ರಾಮ ಪಂಚಾಯತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಿಸಲು ಅವಕಾಶವಿದೆ ಎಂದರು.
ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿ ಕುರಿತು ಸಭೆಯಲ್ಲಿ ವಿವರಿಸಿದರು. ಎಲ್ಲಾ ತಾಂತ್ರಿಕ ಸಹಾಯಕರು ಪ್ರತಿ ಕಾಲೋನಿಗೆ ಭೇಟಿ ನೀಡಿ ಚರಂಡಿ, ರಸ್ತೆ, ಶಾಲಾಭಿವೃದ್ಧಿ ಕಾಮಗಾರಿಗಳು ಅನುಷ್ಠಾನಿಸಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ತಿಳಿಸಿದರು. ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಕಾಮಗಾರಿಗಳನ್ನು ಅನುಷ್ಠಾನಿಸಲಾಗುವದು ಎಂದು ಸಭೆಯಲ್ಲಿ ಗ್ರಾಮಸ್ಥರಿಗೆ ಮನವರಿಕೆ ಮಾಡಿದರು.
ಗ್ರಾಮದಲ್ಲಿರುವ ಸಣ್ಣ, ಅತೀ ಸಣ್ಣ ರೈತರಿಗೆ ನರೇಗಾದಡಿ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವದು. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ರೈತರು ಅರಿತುಕೊಂಡು ತಮ್ಮ ಆದ್ಯತಾ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರಾದ ಯಂಕಪ್ಪ, ಗ್ರಾಮ ಪಂಚಾಯತ ಅಧ್ಯಕ್ಷರಾದ ದುರಗಪ್ಪ ಭಜೆಂತ್ರಿ, ಗ್ರಾ.ಪಂ ಸದಸ್ಯರಾದ ಅಂದಪ್ಪ ಚೀಲಗೋದ್ರ ಹಾಗೂ ಭರಮಪ್ಪ ಹುಳ್ಳಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ದಾನಪ್ಪ ಸಂಗಟಿ, ತಾಂತ್ರಿಕ ಸಂಯೋಜಕ ಯಮನೂರಪ್ಪ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮದ ಮುಖಂಡರಾದ ಚಂದ್ರಪ್ಪ ಹುಳ್ಳಿ, ಯಲ್ಲಪ್ಪ ಮಾಗಳಾದ, ದೇವಪ್ಪ ಮಾಗಳಾದ, ಸಣ್ಣ ಈರಪ್ಪ ಅಣಬಿ, ಮಂಜಪ್ಪ ಸಂಗಟಿ ಸೇರಿದಂತೆ ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಗ್ರಾಮ ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.
****

Get real time updates directly on you device, subscribe now.

Comments are closed.

error: Content is protected !!