ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನೆ ಅ.14ಕ್ಕೆ

Get real time updates directly on you device, subscribe now.

ಕುಕನೂರಿನಲ್ಲಿ ವ್ಹಾಲಿಬಾಲ್, ಕೊಪ್ಪಳದಲ್ಲಿ ಖೋ ಖೋ ಪಂದ್ಯಾವಳಿ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯಲಬುರ್ಗಾ ತಾಲೂಕ ಆಡಳಿತ, ತಾಲೂಕ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕುಕನೂರಿನ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವ್ಹಾಲಿಬಾಲ್ ಹಾಗೂ ಖೋ ಖೋ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 14ರಂದು ಸಂಜೆ 04 ಗಂಟೆಗೆ ಕುಕನೂರಿನ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ.
ಪಂದ್ಯಾವಳಿಗಳ ವಿವರ: ವಿಭಾಗ ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯು ಅ.15 ರಿಂದ ಅ.16ರ ವರೆಗೆ ಕುಕನೂರಿನ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಮತ್ತು ವಿಭಾಗ ಮಟ್ಟದ ಖೋ ಖೋ ಪಂದ್ಯಾವಳಿಯು ಅ.17 ರಿಂದ ಅ.19 ರವರೆಗೆ ಕೊಪ್ಪಳ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿವೆ.
ಉದ್ಘಾಟನಾ ಕಾರ್ಯಕ್ರಮ: ಅ.14ರಂದು ಸಂಜೆ 04 ಗಂಟೆಗೆ ಕುಕನೂರಿನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ ಅವರು ಘನ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಶಾಸಕರುಗಳಾದ ಕೆ.ರಾಘವೇಂದ್ರ ಬಸವರಾಜ ಹಿಟ್ನಾಳ ಹಾಗೂ ಜಿ.ಜನಾರ್ಧನರಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ ನಮೋಶಿ, ಡಾ.ಚಂದ್ರಶೇಖರ ಬಿ ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬೀಸಾಬ ದೋಟಿಹಾಳ, ಕುಕನೂರ ಪಟ್ಟಣ ಪಂಚಾಯತ ಅಧ್ಯಕ್ಷರಾದ ಲಲಿತಮ್ಮ ಯಡಿಯಾಪೂರ, ಯಲಬುರ್ಗಾ ಪಟ್ಟಣ ಪಂಚಾಯತ ಅಧ್ಯಕ್ಷರಾದ ಅಂದಯ್ಯ ಕಳ್ಳಿಮಠ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್, ಜಿಲ್ಲಾಧಿಕಾರಿಗಳಾದ ನಳಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್ ಅರಸಿದ್ಧಿ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಯಲಬುರ್ಗಾ ತಹಶೀಲ್ದಾರರಾದ ಬಸವರಾಜ ತೆನ್ನಳ್ಳಿ, ಕುಕನೂರು ತಹಶೀಲ್ದಾರರಾದ ಹೆಚ್.ಪ್ರಾಣೇಶ ಸೇರಿದಂತೆ ತಾಪಂ ಇಓ, ಪೊಲೀಸ್ ಅಧಿಕಾರಿಗಳು, ಸರ್ಕಾರಿ ನೌಕರರ ಸಂಘ, ಶಿಕ್ಷಕರ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯವರು, ದೈಹಿಕ ಶಿಕ್ಷಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿರುವರು.

Get real time updates directly on you device, subscribe now.

Comments are closed.

error: Content is protected !!