ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

Get real time updates directly on you device, subscribe now.

): ಎನ್.ಐ.ಇ.ಎಲ್.ಐ.ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಗವಿಶಂಕರ್ ಕೆ. ಅವರು ತಿಳಿಸಿದ್ದಾರೆ.
ಭಾರದ ಸರ್ಕಾರದ ವಿದ್ಯನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (ಎನ್.ಐ.ಇ.ಎಲ್.ಐ.ಟಿ) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (ಎನ್.ಸಿ.ಎಸ್), ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ‘ಉದ್ಯೋಗ ಮೇಳ’ ವನ್ನು ಅಕ್ಟೋಬರ್ 20ರಂದು ಬೆಂಗಳೂರು ನಗರ ಜಿಲ್ಲೆಯ ಕೆ.ಎಲ್.ಇ ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಆಯೋಜಿಸಲಾಗುತ್ತದೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚು ಉದ್ಯೋಗಕಾಂಕ್ಷಿಳು ಮತ್ತು ರಾಜ್ಯದ ಎಲ್ಲಾ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಾಧ್ಯಮ ಹಾಗೂ ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿರುತ್ತದೆ.
ಕೊಪ್ಪಳ ಜಿಲ್ಲೆಯ ಯುವಜನತೆ ಹಾಗೂ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು  https://jobfair.calicut.nielit.in ರ ಮುಖಾಂತರ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!