ಸವದತ್ತಿಗೆ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

0

Get real time updates directly on you device, subscribe now.

ಬೆಳಗಾವಿ, ಸವದತ್ತಿ, ಅಕ್ಟೋಬರ್ 13: ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವನೀರು, ಶೌಚಾಲಯ, ಪಾರ್ಕಿಂಗ್, ತಂಗುದಾಣದ ವ್ಯವಸ್ಥೆಯನ್ನು ಪೂರೈಸಬೇಕಾಗಿದೆ. ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಕ್ಷೇತ್ರದಲ್ಲಿ 1087ಎಕರೆ ಪ್ರದೇಶ ಲಭ್ಯವಿದ್ದು, ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಈ ಪ್ರದೇಶವನ್ನು ಬಳಸಿಕೊಳ್ಳಲಾಗುವುದು. ಮನುಷ್ಯರಿಗೆ ದಾಸೋಹ ವ್ಯವಸ್ಥೆಯಿರುವಂತೆ ರಾಸುಗಳಿಗೂ ಮೇವು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.

ನ್ಯಾಯಯುತ ತೆರಿಗೆ ಪಾಲು ಬಂದರೆ ಅಭಿವೃದ್ಧಿ ಸಾಧ್ಯ

ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿದ್ದ ತೆರಿಗೆ ಪಾಲು ನೀಡದೇ, ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿರುವ ನಮಗೆ ಅನ್ಯಾಯವಾಗಬಾರದು. ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲನ್ನು ಕೇಂದ್ರ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತದ ಬಿಜೆಪಿಯವರು , ಕೇವಲ ಕೋಮುವಾದಿ ಕ್ಷುಲ್ಲಕ ವಿಚಾರಗಳಿಗೆ ಪ್ರತಿಭಟನೆ ಮಾಡುತ್ತಾರೆ ಎಂದರು.

 

ಬೆಳಗಾವಿ ಅಧಿವೇಶನದ ವೇಳೆಗೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ವಿಜಯೇಂದ್ರ ರವರ ತಂದೆ ಯಡಿಯೂರಪ್ಪನವರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಮ್ಮ ಮೇಲೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆ ಇದೆ ? ಕಾಂಗ್ರೆಸ್ ಸರ್ಕಾರಕ್ಕೆ ಜನ ನೀಡುತ್ತಿರುವ ಬೆಂಬಲವನ್ನು ಸಹಿಸಲಾಗದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

Get real time updates directly on you device, subscribe now.

Leave A Reply

Your email address will not be published.

error: Content is protected !!