ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು

Get real time updates directly on you device, subscribe now.

ತಂಬಾಕು ಮುಕ್ತ ಯುವ ಅಭಿಯಾನ: ಪೋಸ್ಟರ್ ಬಿಡುಗಡೆ

 ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ತಂಬಾಕು ಮುಕ್ತ ಯುವ ಅಭಿಯಾನ 2.0” ಅಂಗವಾಗಿ ಜಿಲ್ಲಾಧಿಕಾರಿಗಳಾದ ನಲೀನ ಅತುಲ್ ಅವರು ಐಇಸಿ ಪೋಸ್ಟರ್ ಬಿಡುಗಡೆಗೊಳಿಸಿದೆರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಐಇಸಿ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಲಿಂಗರಾಜು ಟಿ., ಕಾರ್ಯಕ್ರಮದ ಅನುಷ್ಠಾನ ಅಧಿಕಾರಿಗಳಾದ ಡಾ.ನಂದಕುಮಾರ ಹೆಚ್ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

  ಜಿಲ್ಲೆಯ ಕುಷ್ಟಗಿ ಪಟ್ಟಣದ ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ತಪಾಸಣಾ ತಂಡವು ಅಕ್ಟೋಬರ್ 14ರಂದು ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದೆ.

 ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ “ತಂಬಾಕು ಮುಕ್ತ ಯುವ ಅಭಿಯಾನ 2.0” ಅಂಗವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೋಲಿಸ್ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲದ ಅಧಿಕಾರಿಗಳು ಹಾಗೂ ನಗರ ಸಭೆ ಸಿಬ್ಬಂದಿಗಳ ಸಹಯೋಗದಲ್ಲಿ ಕುಷ್ಟಗಿ ತಾಲೂಕಿನಲ್ಲಿ ಕೊಟ್ಟಾ-2003 ಕಾಯ್ದೆಯಡಿಯಲ್ಲಿ ತಂಬಾಕು ಹಾಗೂ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ, ಸೆಕ್ಷನ್4ರಡಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!