ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ದೂರು ಸ್ವೀಕಾರಕ್ಕೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ನೇಮಕ
: ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಕೊಪ್ಪಳ ಜಿಲ್ಲೆಯ 07 ತಾಲೂಕುಗಳ ತಹಶೀಲ್ದಾರರನ್ನು ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶಿಸಿದ್ದಾರೆ.
*ನೋಡಲ್ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳು:* ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕರಿ 07 ದಿನಗಳೊಳಗಾಗಿ ಸ್ಥಳೀಯ ಸಮಿತಿಗೆ ಕಳುಹಿಸಬೇಕು. ನೋಡಲ್ ಅಧಿಕಾರಿಗಳು ತಮ್ಮಲ್ಲಿ ಸ್ವೀಕೃತವಾಗಿರುವ ಲೈಂಗಿಕ ಕಿರುಕುಳದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆ ಅಥವಾ ಸಂಸ್ಥೆಗೆ ವಿಚಾರಣೆಗಾಗಿ ಕಳುಹಿಸುವುದು ಮತ್ತು “SHe-Box” ಇ-ಪೋರ್ಟಲ್ ವ್ಯವಸ್ಥೆಯಲ್ಲಿ ಅಪ್‌ಡೇಟ್ ಮಾಡಬೇಕು. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಯಾವುದೇ ಮಹಿಳೆಗೆ ನಡೆಯದಂತೆ ತಡೆಯಲು ವ್ಯಾಪಕ ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಕಾಯ್ದೆಯಡಿ ಸೂಚಿಸಿದಂತೆ ಪ್ರತಿಯೊಂದು ಕೆಲಸದ ಸ್ಥಳದಲ್ಲಿ ಆಂತರಿಕ ಸಮಿತಿಯನ್ನು ರಚಿಸಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ನೀಡುವ ಸೂಕ್ತ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಪ್ರಕಟಣೆ ತಿಳಿಸಿದ್ದಾರೆ.
Comments are closed.