ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಪುನರ್ ರಚಿಸಲು ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
): ಸರ್ಕಾರದ ಆದೇಶದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ಪುನರ್ ರಚಿಸಲು ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮತ್ತು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆ ತಿಳಿಸಿದ್ದಾರೆ.
Comments are closed.