ಅರ್ಥಪೂರ್ಣ ಕನ್ನಡ ರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ನಲಿನ್ ಅತುಲ್
ನವೆಂಬರ್ 01ರಂದು ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಅಕ್ಟೋಬರ್ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯೋತ್ಸವದಿನದಂದು ಬೆಳಿಗ್ಗೆ 07ಗಂಟೆಗೆ ನಗರದ ತಹಶೀಲ್ದಾರರ ಕಚೇರಿಯಲ್ಲಿ ನಾಡ ದೇವತೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೇವಿಯ ಭಾವಚಿತ್ರದ ಮೆರವಣಿಗೆ ಅಶೋಕ ವೃತ್ತ, ಕೇಂದ್ರೀಯ ಬಸ್ ನಿಲ್ದಾಣದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸುವಂತೆ ಹಾಗೂ ಮೆರವಣಿಗೆ ಮತ್ತು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಬೇಕು. ಕಾರ್ಯಕ್ರಮ ದಿನದಂದು ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ, ವೇದಿಕೆ ಅಲಂಕಾರ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಹಾಗೂ ಈ ನಿಟ್ಟಿನಲ್ಲಿ ರಚಿಸಲ್ಪಟ್ಟ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳಿಗೆ ಮಾತ್ರ ಅವಕಾಶ ನೀಡಬೇಕು. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಭಾಷಣಕ್ಕಾಗಿ ಇಲಾಖೆಗಳು ಅಗತ್ಯ ಮಾಹಿತಿಯನ್ನು ಸಕಾಲಕ್ಕೆ ನೀಡಬೇಕು ಎಂದು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಕನ್ನಡ ರಾಜ್ಯೋತ್ಸವದ ವ್ಯವಸ್ಥಿತ ಆಚರಣೆಗಾಗಿ ರಚಿಸಿದ ಸಮಿತಿಗಳು ತಮಗೆ ನೀಡಿದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ.ಕೆ.ಎಸ್.ಆರ್.ಟಿ.ಸಿ ಬಸ್ ಸೌಕರ್ಯ ಒದಗಿಸಬೇಕು. ಪಥಸಂಚಲನ ಮತ್ತು ಅದರ ಪೂರ್ವ ತರಬೇತಿಗೆ ಪಾಲ್ಗೊಳ್ಳುವ ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಅಕ್ಷರ ದಾಸೋಹ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಸಮಿತಿಗೆ ಅಕ್ಟೋಬರ್ 25ರೊಳಗಾಗಿ ಮಾಹಿತಿ ನೀಡಬೇಕು ಎಂದರು.
*ರಾಜ್ಯೋತ್ಸವ ಪುರಸ್ಕಾರ ನೀಡಲು ಮನವಿ:* ಕನ್ನಡ ನೆಲೆ, ಜಲ, ಭಾಷೆ ಸೇರಿದಂತೆ ಕನ್ನಡಕ್ಕಾಗಿ ದುಡಿಯುವ ಕನ್ನಡಾಭಿಮಾನ ಹೊಂದಿದ ಮಹನೀಯರಿಗೆ, ಸಾಹಿತಿಗಳು, ಚಿಂತಕರಿಗೆ ಕರ್ನಾಟ ರಾಜ್ಯೋತ್ಸವ ಸಂದರ್ಭದಲ್ಲಿ ಬೇರೆ-ಬೇರೆ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಈ ಪರಂಪರೆಯನ್ನು ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ಮುಂದುವರೆಸಬೇಕೆಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರಾದ ಮಂಜುನಾಥ ಗೊಂಡಬಾಳ ಅವರು ಸಭೆಗೆ ಮನವಿ ಮಾಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ್, ಕನ್ನಡ ಮತ್ತು ಸಂಸಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
****

Comments are closed.