ಅ.23ರಂದು ಕೊಪ್ಪಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

Get real time updates directly on you device, subscribe now.

ಕೊಪ್ಪಳ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

 ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಾಗೂ ಕೊಪ್ಪಳ ಪಂಚಮಸಾಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಸುಮಂಗಲಾ ಎಸ್ ಹಂಚಿನಾಳ ಅವರು ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!