ವೀರಶೈವ ಲಿಂಗಾಯತ ಮಹಾಸಭಾದ  ನೂತನ ಪದಾಧಿಕಾರಿಗಳ ಪದ ಗ್ರಹಣ

Get real time updates directly on you device, subscribe now.

 

ಕೊಪ್ಪಳ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಕೊಪ್ಪಳ ಜಿಲ್ಲಾ ಹಾಗೂ ಕೊಪ್ಪಳ ತಾಲೂಕ ಘಟಕಗಳ ನೂತನ ಪದಾಧಿಕಾರಿಗಳ ಪದ ಗ್ರಹಣ ಸಮಾರಂಭ ದಿ 21 ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರುಗಲಿದೆ ಎಂದು ಮಹಾಸಭಾದ ಜಿಲ್ಲಾ ಅಧ್ಯಕ್ಷ ಕಳಕನ ಗೌಡ ಪಾಟೀಲ್ ತಿಳಿಸಿದ್ದಾರೆ
ಅವರು ರವಿವಾರ ಬೆಳಿಗ್ಗೆ ಇಲ್ಲಿನ ಪತ್ರಿಕಾ ಭವನ್ ದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಅಖಿಲ ಭಾರತ ವೀರಶೈವ ಲಿಂಗಾಯತ್ ಮಹಾಸಭಾ ಜಿಲ್ಲಾ ಮತ್ತು ಜಿಲ್ಲೆಯ ತಾಲೂಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿದ್ದು ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಮತ್ತು ಸರ್ವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಬೇಕೆಂದು ನೂತನ ಜಿಲ್ಲಾ ಅಧ್ಯಕ್ಷರಾದ ಕಳಕನ ಗೌಡ ಪಾಟೀಲ್ ಮನವಿ ಮಾಡಿಕೊಂಡರು
ಸದರಿ ಕಾರ್ಯಕ್ರಮದಲ್ಲಿ ಮಹಾಸಭಾ ದ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ ಅವರು ಪಾಲ್ಗೊಳ್ಳುವ ನೀರಿಕ್ಷೆ ಇದೆ, ಕಾರಣ ಸರ್ವರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿಕೊಂಡರು
ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಪದಾಧಿಕಾರಿಗಳಾದ ಉಮೇಶ್ ಕೆ, ನಾಗಭೂಷಣ ಸಾಲಿಮಠ ದೇಸಾಯಿಗೌಡ ಪಾಟೀಲ್ ಶಿವಪುತ್ರಪ್ಪ ಕೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು

 

Get real time updates directly on you device, subscribe now.

Comments are closed.

error: Content is protected !!