ನ.11ರಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ : ಕೆ ಸುಭಾಸ್ ಕನಕಗಿರಿ

0

Get real time updates directly on you device, subscribe now.

ಕೊಪ್ಪಳ:ಮಾದಿಗ ದಂಡೋರ ಹೋರಾಟ ಸಮಿತಿ ವತಿಯಿಂದ ನ. 11 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾದಿಗ ದಂಡೋರ ಹೋರಾಟ ಸಮಿತಿಯ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸುಭಾಸ್ ಕನಕಗಿರಿ ತಿಳಿಸಿದರು.

ಅವರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಸುಪ್ರೀಂ ಕೋರ್ಟ್‌ ಅಗಸ್ಟ್ 1 ರಂದು ಆಯಾ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ಧ ಕೀರ್ತಿನಂತೆ ಕರ್ನಾಟಕ ಸರ್ಕಾರವು ಎಸ್. ಸಿ. ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಕಾರ್ಯಕ್ರಮಕ್ಕೆ ರಾಜ್ಯ ಜಿಲ್ಲಾ ತಾಲೂಕ ಹೋಬಳಿ ಗ್ರಾಮ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಮಾದಿಗ ಸಮಾಜದ ಮುಖಂಡರು ಯುವಕರು ಬುದ್ಧಿಜೀವಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ಸಿಗೊಳಿಸಬೇಕೆಂದು ವಿನಂತಿಸಿಕೊಂಡರು.

ಈ ವೇಳೆ ಮಾತನಾಡಿದ ಕೊಪ್ಪಳ ಜಿಲ್ಲಾ ಕಾರ್ಯಾಧ್ಯಕ್ಷರಾದ ಗಂಗಣ್ಣ ಸಿದ್ದಾಪುರ ಮಾತನಾಡಿ,
ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದೆ ಒಳ ಮೀಸಲಾತಿ ನ್ಯಾಯ ಸಮ್ಮತವಾಗಿದೆ. ಕೂಡಲೇ ಆಯಾ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಪ್ರಕಟಿಸಿದ ತೀರ್ಪಿನಂತೆ ಸರ್ಕಾರಗಳು ನಡೆದುಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಚಿತ್ರದುರ್ಗದಲ್ಲಿ ಮಾಡಿದ ಘೋಷಣೆಯಂತೆ ಶೀಘ್ರದಲ್ಲೇ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಮೂರ್ತಿ ಸಂಗಾಪುರ್, ಕಾರಟಗಿ ತಾಲೂಕ ಅಧ್ಯಕ್ಷ ಶಿವಣ್ಣ ಇಳಿಗಿನೂರು, ಗಂಗಾವತಿ ತಾಲೂಕ ಅಧ್ಯಕ್ಷ ಮಹದೇವ ಬಡಿಗೇರ್, ಜಿಲ್ಲಾ ಗೌರವಾಧ್ಯಕ್ಷ ಹನುಮಂತಪ್ಪ ಡಗ್ಗಿ , ಶರಣಪ್ಪ ಸಾಲ್ಮನಿ ಓಜನಹಳ್ಳಿ , ತಿಪ್ಪೇಶ್ ಎಮ್ ಸುಗುರ್, ದುರ್ಗೇಶ್ ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!