ಇಂದು ಕೊಪ್ಪಳದಲ್ಲಿ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ ಕಾರ್ಯಕ್ರಮ

Get real time updates directly on you device, subscribe now.

  ಕರ್ನಾಟಕ ಅರಣ್ಯ ಇಲಾಖೆಯ 70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ಬೆಳೆಗ್ಗೆ 9 ಗಂಟೆಗೆ ನಗರದ ಶ್ರೀ ಗವಿಮಠದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಶ್ರೀ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು ಹಾಗೂ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.  ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ್, ಬಳ್ಳಾರಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಂದ್ರಶೇಖರ ನಾಯಕ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರು ಆಗಮಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ, ಕೊಪ್ಪಳ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹುಸೇನ ಬಸಿಯಾ ಪೆಂಡಾರಿ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
****

Get real time updates directly on you device, subscribe now.

Comments are closed.

error: Content is protected !!