ಜನಸಾಮಾನ್ಯರಿಗೆ ನಿವೇಶನ ಒದಗಿಸುವುದಕ್ಕೆ ಮೊದಲ ಆದ್ಯತೆ –ಶ್ರೀನಿವಾಸ್ ಗುಪ್ತ
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ, ಸದಸ್ಯರು ಅಧಿಕಾರ ಸ್ವೀಕಾರ
ಕೊಪ್ಪಳ : ಕೊಪ್ಪಳ ನಗರವು ಸಾಕಷ್ಟು ವೇಗವಾಗಿ ಬೆಳೆಯುತ್ತಿದೆ. ಬೆಳೆಯುತ್ತಿರುವ ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ನಗರಕ್ಕೆ ಅವಶ್ಯಕವಾಗಿ ಬೇಕಾಗಿರುವಂತಹ ಉದ್ಯಾನವನ , ನೀರಿನ ವ್ಯವಸ್ಥೆ ಹಾಗೂ ಸೂಕ್ತ ರೀತಿಯಲ್ಲಿ ವಿದ್ಯುತ್ ಕಂಬಗಳ ವ್ಯವಸ್ಥೆ, ಡಿವೈಡರ್ಗಳ ನಿರ್ಮಾಣ ಹಾಗೂ ಸರ್ಕಲ್ಗಳ ಅಭಿವೃದ್ಧಿ ಜೊತೆಗೆ ಜನಸಾಮಾನ್ಯರಿಗೆ ನಿವೇಶನಗಳನ್ನು ಒದಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಶ್ರೀನಿವಾಸ್ ಗುಪ್ತ ಹೇಳಿದರು.
ನಗರದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡುತ್ತೇನೆ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತೇನೆ. ಜವಾಬ್ದಾರಿಯನ್ನು ನೀಡಿದ ಎಲ್ಲಾ ಮುಖಂಡರಿಗೆ ಧನ್ಯವಾದಗಳು ಅರ್ಪಿಸಿದರು
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ, ಉದ್ಯಮಿ ಶ್ರೀನಿವಾಸ ಗುಪ್ತ ಇಂದು ಅಧಿಕಾರ ಸ್ವೀಕಾರ ಮಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪೂಜೆ ನೆರವೇರಿಸಿದ ನಂತರ ಅಧಿಕಾರ ಸ್ವೀಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್ , ಮಾಜಿ ಶಾಸಕ ಬಸವರಾಜ್ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು ಖತಿಬ್ ಬಾಷು ಬೈ, ಮಾರ್ಕಂಡೆಪ್ಪ ಕಲ್ಲನ್ನವರ್, ಅಜ್ಜಪ್ಪ ಚನ್ನವಡೆ ಯರಮಠ,ಶ್ರೀಮತಿ ಕಾಳಮ್ಮ ಶರಣಪ್ಪ ಚಂದನಕಟ್ಟಿ ಹಾಗೂ ಗಂಗಾವತಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಲ್ಯಾಸ್ ಖಾದ್ರಿ, ಭಾಗ್ಯನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ತುಕಾರಾಮಪ್ಪ ಗಡಾದ್, ಉಪಾಧ್ಯಕ್ಷ ಹೊನ್ನೂರುಸಾಬ್ ಬೈರಾಪುರ, ಕೃಷ್ಣ ಇಟ್ಟಂಗಿ, ಶಾಂತಣ್ಣ ಮುದುಗಲ್, ಕೆಎಂ ಸೈಯದ್, ಚೆನ್ನಪ್ಪ ತಟ್ಟಿ, ಪ್ರಸನ್ನ ಗಡಾದ, ಜಲವರ್ದಿನಿ ಹನುಮಂತಪ್ಪ ಬಿಡ್ನಾಳ್, ಕಟ್ಟಾ ರಾಮ್ ಬಾಬು, ವಿಷ್ಣು, ಪರಶುರಾಮ್ ಪವಾರ್, ಮೋಹನ್ ಮೇಘರಾಜ್, ಜ್ಯೋತಿ ಗೊಂಡಬಾಳ್ , ಸೇರಿದಂತೆ ನಗರಸಭೆ ಹಾಗೂ ಪಟ್ಟಣ ಪಂಚಾಯತ್ ನ ಸದಸ್ಯರು, ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಯೋಗೇಶ್, ಭಾಗವಹಿಸಿದ್ದರು. ಕಾರ್ಯಕ್ರಮದ ಸಾನಿಧ್ಯವನ್ನು ಸಹಜಾನಂದ ಸ್ವಾಮೀಜಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ವೀರಸಂಗಟನೆಯ ಕಾರ್ಯಕರ್ತರು ಪದಾಧಿಕಾರಿಗಳು ನೂತನ ನಗರ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತ ಹಾಗೂ ಸದಸ್ಯರಿಗೆ ಆತ್ಮೀಯವಾಗಿ ಸನ್ಮಾನಿಸಿದರು.
Comments are closed.