ಕೆ.ಆರ್.ಡಿ.ಬಿ. ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಡಾ. ಅಜಯಸಿಂಗ್

0

Get real time updates directly on you device, subscribe now.

ಕೊಪ್ಪಳ. ಅಕ್ಟೋಬರ್.22.):- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ನೆಪ ಹೇಳದೆ ಕಾಲಮಿತಿಯಲ್ಲಿ ಮುಗಿಸಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಅವರು ಮಂಗಳವಾರ ಕೊಪ್ಪಳ ‌ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

2018- 19, 2019-20 ಮತ್ತು 2020-21ರಲ್ಲಿ
ಕಾಮಗಾರಿಗಳು ಯಾಕೆ ಬಾಕಿ ಇವೆ ಎಂದು ಕೇಳಿದರು. ಬಹುದಿನಗಳಿಂದ ಬಾಕಿ ಇರುವ ಜಿಲ್ಲಾ ರಂಗಮಂದಿರವನ್ನು 15 ದಿನಗಳೊಳಗೆ ಪೂರ್ಣಗೊಳಿಸಲು ಗಡುವು ವಿದಿಸಿದರು.
ಬೇರೆ ಬೇರೆ ಬಾಕಿ ಇರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಿ ಎಂದು ನಿರ್ದೇಶನ ನೀಡಿದರು.

ರಸ್ತೆ. ಬಿಲ್ಡಿಂಗ್. ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಬೇರೆ ಬೇರೆ ಕಾಮಗಾರಿಗಳು ಬಾಕಿ ಉಳಿಯುವದಕ್ಕೆ ನೆಪ ಹೇಳಬಾರದು. ಅನಿವಾರ್ಯವಿದ್ದರೆ ಬದಲಿ ಕಾಮಗಾರಿಗೆ ಅನುಮತಿ ಪಡೆದು ಅನುದಾನ ಬಳಕೆಗೆ ಗಮನ ಕೊಡಬೇಕು ಎಂದರು.

ಸೆಪ್ಟೆಂಬರ್ 17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 24 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಂಜೂರಾತಿ ನೀಡಲಾಗಿದೆ. ಇದರಲ್ಲಿ 18 ಟೆಂಡರ್ ಆಗಿವೆ ಎಂದರು. ಕೊಪ್ಪಳ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದರು.

ಪ್ರತಿವರ್ಷ ನಿಗದಿಪಡಿಸುವ
ಕೆ.ಕೆ.ಆರ್.ಡಿ.ಬಿ. ಹಣವು ಬಳಕೆ ಆಗಲ್ಲ ಎಂಬ ಆಪಾದನೆ ಇದೆ. ಅಧಿಕಾರಿಗಳು ಅನುದಾನ ಬಳಕೆಗೆ ಗಮನ ಹರಿಸದಿದ್ದರೆ ಈ ರೀತಿಯ ದೂರಗಳು ಬರುತ್ತವೆ. ಹೀಗಾಗಿ ಅಧಿಕಾರಿಗಳು ಕಾಲಹರಣ ಮಾಡದೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಜಿಲ್ಲಾ ‌ಪಂಚಾಯತ ಮತ್ತು ನಿರ್ಮಿತಿ ಕೇಂದ್ರ ಇವರು ಬಾಕಿ ಉಳಿಸಿಕೊಂಡ ಎಲ್ಲ ಕಾಮಗಾರಿಗಳನ್ನು ಬೇಗನೇ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತು ಕೊಡಬೇಕು. ಕೆಲಸ ಮಾಡದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು‌ ತಿಳಿಸಿದರು.

ಕ.ಕ.ಪ್ರ.ಅ. ಮಂಡಳಿಯ ಕಾರ್ಯದರ್ಶಿ ಎಂ ಸುಂದರೇಶಬಾಬು ಅವರು ಮಾತನಾಡಿ, 2023-24ನೇ ಸಾಲಿನ ಕಾಮಗಾರಿಗಳನ್ನು ಈಗಲೇ ಆರಂಭಿಸಬೇಕು.
2023-24ನೇ ಸಾಲಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು 2024-25ನೇ ಸಾಲಿನ ನವೆಂಬರ ಗೇ ಶೇ.50ರಷ್ಟು ಮತ್ತು ಡಿಸೆಂಬರನಲ್ಲಿ ಶೇ.50ರಷ್ಟು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು
ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಮತ್ತು ಶಾಸಕರಾದ ದೊಡ್ಡನಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮತ್ತು ಶಾಸಕರಾದ ಬಸವರಾಜ ರಾಯರೆಡ್ಡಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!