ಅ.25 ರಂದು ಮಿನಿ ಜಾಬ್ ಫೇರ್

Get real time updates directly on you device, subscribe now.

ಕೊಪ್ಪಳ,  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ಗಂಟೆಯವರೆಗೆ ಮಿನಿ ಜಾಬ್‌ಫೇರ್ ಆಯೋಜಿಸಲಾಗಿದೆ. ಈ ಮಿನಿ ಜಾಬ್ ಫೇರ್‌ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಎಸ್.ಎಸ್.ಎಲ್.ಸಿ, ಪಿಯುಸಿ/ತತ್ಸಮಾನ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಬಿ.ಇ ಇಲೆಕ್ಟಿçಕಲ್, ಎಂ.ಎಸ್.ಸಿ ಮೆಥಮೆಟಿಕ್ಸ್ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 30 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಮಿನಿ ಜಾಬ್ ಫೇರ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ದೂ.ಸಂ: 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Get real time updates directly on you device, subscribe now.

Comments are closed.

error: Content is protected !!