ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು: ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರಕಾರ ಪ್ರತಿವರ್ಷ 5 ಸಾವಿರ ಕೋಟಿ ರೂ. ಅನುದಾನವನ್ನು ನೀಡುತ್ತಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು.
ನಾನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾದ ಮೇಲೆ ಅಕ್ಷರ ಆವಿಷ್ಕಾರ. ಉದ್ಯೋಗ ಆವಿಷ್ಕಾರ. ಆರೋಗ್ಯ ಆವಿಷ್ಕಾರ ಸೇರಿದಂತೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಕೆ.ಕೆ.ಆರ್.ಡಿ. ಬಿ ಅನುದಾನದಲ್ಲಿ ಶೇ. 25 ಪ್ರತಿಶತ ಹಣವನ್ನು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.
ನAಜುAಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕು ಹಾಗೂ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ನಮ್ಮ ಭಾಗದ 21 ತಾಲ್ಲೂಕುಗಳು ಸೇರಿವೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 41 ತಾಲ್ಲೂಕುಗಳಿದ್ದು ಇವುಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. 45 ಕೋಟಿ ರೂ. ವೆಚ್ಚದಲ್ಲಿ 112 ಬಸ್ಸುಗಳನ್ನು ಖರೀದಿಸುತ್ತಿದ್ದೆವೆ. ನಮ್ಮ ಭಾಗದಲ್ಲಿ 2618 ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.
ಕಳೆದ 10 ವರ್ಷಗಳಲ್ಲಿ ಕೆ.ಕೆ.ಆರ್.ಡಿ.ಬಿ. ಯಿಂದ ಕೊಪ್ಪಳ ಜಿಲ್ಲೆಯ ಒಟ್ಟು 4718 ಕಾಮಗಾರಿಗಳಲ್ಲಿ 3769 ಕಾಮಗಾರಿಗಳು ಪೂರ್ಣಗೊಂಡಿದ್ದು. 864 ಕಾಮಗಾರಿಗಳು ಪ್ರಗತಿಯಲ್ಲಿವೆ. 2024- 25 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ 5 ತಾಲ್ಲೂಕುಗಳಿಗೆ 238 ಕೋಟಿ ರೂ. ಹಣವನ್ನು ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆ ಅಡಿಯಲ್ಲಿ ನೀಡಲಾಗಿದೆ ಎಂದರು.
2012 ರಲ್ಲಿ ಮನಮೋಹನ ಸಿಂಗ್ ಅವರು ಪ್ರಧಾನ ಮಂತ್ರಿ ಆಗಿದ್ದಾಗ ನಮ್ಮ ಭಾಗದ ಬಹುದಿನಗಳ ಬೇಡಿಕೆ ಕಲಂ 371 ಜೆ ಜಾರಿಯಾಯಿತು ಇದಕ್ಕೆ ಈ ಭಾಗದ ಜನರ ಹಲವಾರು ವರ್ಷಗಳ ಹೋರಾಟ ಮತ್ತು ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್ ಅವರ ವಿಶೇಷ ಪ್ರಯತ್ನದಿಂದಾಗಿ 371 ಜೆ ಜಾರಿಯಾಯಿತು. ಇದರಿಂದ ನಮ್ಮ ಭಾಗದ ಜನರಿಗೆ ಹಲವಾರು ಸೌಲಭ್ಯಗಳು ಸಿಗುತ್ತಿವೆ ಎಂದು ಹೇಳಿದರು.
ಕೊಪ್ಪಳ ಜಿಲ್ಲೆಯನ್ನು ಜೈನರ ಕಾಶಿ. ಐತಿಹಾಸಿಕ ಆನೆಗೊಂದಿ ಮತ್ತು ಪಕ್ಕದಲ್ಲಿ ಹಂಪಿಯAತಹ ಐತಿಹಾಸಿಕ ಸ್ಥಳಗಳಿಂದ ಕೂಡಿದ ಇತಿಹಾಸ ಈ ಜಿಲ್ಲೆಗೆ ಇದೆ. ನಿನ್ನೆ ಅಧಿಕಾರಿಗಳನ್ನು ಕರೆದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಭೆ ಮಾಡಲಾಗಿದ್ದು ಕೆ.ಕೆ.ಆರ್.ಡಿ.ಬಿ.ಯಿಂದ ನಡೆಯುತ್ತಿರುವ. ರಸ್ತೆ. ಶಾಲಾ ವಸತಿ ಕಟ್ಟಡಗಳು. ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಆರೋಗ್ಯ ಕೇಂದ್ರ. ರಂಗಮAದಿರ ಸೇರಿದರೆ ಇತರೆ ಮೈಕ್ರೋ ಹಾಗೂ ಮ್ಯಾಕ್ರೋ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಹಲವಾರು ಕೆಲಸ ಮತ್ತು ಕಾರ್ಯಗಳನ್ನು ಕಾಲಮಿತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿವಿಧ ಕಾಮಗಾರಿಗಳ ಪರಿಶೀಲನೆ: ಪತ್ರಿಕಾಗೋಷ್ಠಿಯ ನಂತರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರು ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Comments are closed.