ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಾಥಾ ಕಾರ್ಯಕ್ರಮ

Get real time updates directly on you device, subscribe now.

): ಬಳ್ಳಾರಿಯ ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ , ಕೊಪ್ಪಳ ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯವಿವಾಹ ನಿಷೇಧ, ಲಿಂಗ ತಾರತಮ್ಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಾಥಾ ಕಾರ್ಯಕ್ರಮವನ್ನು ಅಕ್ಟೋಬರ್ 24ರಂದು ಬೆಳಿಗ್ಗೆ 10 ರಿಂದ 3 ಗಂಟೆಗೆಯವರೆಗೆ ನಗರದ ಜಿಲ್ಲಾ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರಗದ ಅವರು ಸಮಾವೇಶ ಉದ್ಘಾಟಿಸಿವರು. ಬಳ್ಳಾರಿ ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿ.ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೋಲೀಸ್ ಅಧೀಕ್ಷಕರು ಹಾಗೂ ಮಕ್ಕಳ ವಿಶೇಷ ಪೋಲೀಸ್ ಘಟಕದ ನೋಡಲ್ ಅಧಿಕಾರಿಗಳಾದ ಆರ್.ಹೇಮಂತ್ ಕುಮಾರ, ಕೊಪ್ಪಳ ಡಿ.ಎಸ್.ಪಿ ಹಾಗೂ ಹಿರಿಯ ಎಸ್.ಜೆ.ಪಿ.ಯು. ಘಟಕದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಾದ ಮುತ್ತಣ್ಣ ಸರವಗೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಹೆಚ್.ಜಗದೀಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಎಸ್ ಬಿರಾದರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತಸ್ವಾಮಿ ವಿ ಪೂಜಾರ್, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾದ ವೀರಯ್ಯ ಜಿ ಸೂಡಿ ಮಠ ಅವರು ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳ ಯುನಿಸೆಫ್ ಹರೀಶ್ ಜೋಗಿ ಅವರು ಉಪಸ್ಥಿತಿರವರು.
ಜಾಗೃತಿ ಜಾಥಾ: ಬಾಲ್ಯವಿವಾಹ ನಿಷೇಧ, ಲಿಂಗ ತಾರತಮ್ಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಅಂಗವಾಗಿ ಎಸ್.ಪಿ ಕಚೇರಿಯ ಆವರಣದಿಂದ ಹಮ್ಮಿಕೊಂಡ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್. ಅರಸಿದ್ದಿ ಅವರು ಚಾಲನೆ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!