ಕ.ರಾ.ಮು ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

Get real time updates directly on you device, subscribe now.

 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ ಎಂದು ಕ.ರಾ.ಮು.ವಿ.ವಿ ಕೊಪ್ಪಳ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರಥಮ ಬಿಎ, ಬಿಕಾಂ, ಬಿಎಲ್‌ಐಎಸ್ಸಿ, ಬಿಎಸ್ಸಿ, ಬಿಬಿಎ, ಬಿಸಿಎ, ಬಿ.ಎಸ್.ಡಬ್ಲ್ಯೂ ಹಾಗೂ ಪ್ರಥಮ ಎಂಎ (ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ, ಶಿಕ್ಷಣ ಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ) ಎಂ.ಕಾA., ಎಂ.ಎಸ್.ಡಬ್ಲ್ಯೂ, ವಿವಿಧ ಎಂಎಸ್ಸಿ ಕೋರ್ಸ ಗಳಾದ ಜೀವಶಾಸ್ತ್ರ, ರಸಾಯನಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ, ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ದತಿ, ಆಹಾರ ಮತ್ತು ಪೋಷಣೆ, ಜೀವ ರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳಿಗೆ ತರಗತಿಗಳು ಪ್ರಾರಂಭವಾಗಿವೆ.
ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯ ನಕಲು ಪ್ರತಿಯನ್ನು ಪ್ರಾದೇಶಿಕ ಕೇಂದ್ರ ಕಚೇರಿ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9916783555, 9743582257, 9071179986 ಹಾಗೂ ವಿವಿಯ ವೈಬ್‌ಸೈಟ್  www.ksoumysuru.ac.in     ನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!