2012ರ ಪೋಕೋ ಕಾಯ್ದೆ ಅನ್ವಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ

0

Get real time updates directly on you device, subscribe now.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪೋಕೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ, ಸಮಾಜಶಾಸ್ತ್ರ, ಮಕ್ಕಳ ಮನಃಶಾಸ್ತ್ರ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ. 3000 (ರೂಪಾಯಿ ಮೂರು ಸಾವಿರ) ಸಂಭಾವನೆ ನಿಗದಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ನಿರ್ವಹಿಸಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಿಂದ ಪಡೆದು ಸ್ವ ವಿವರ, ವಿದ್ಯಾರ್ಹತೆ ಪ್ರಮಾಣ ಪತ್ರ, ಅನುಭವ ಪ್ರಮಾಣ ಹಾಗೂ ಇತರೆ ಅಗತ್ಯ ದೃಢೀಕೃತ ಪ್ರಮಾಣ ಪತ್ರಗಳೊಂದಿಗೆ ಅಕ್ಟೋಬರ್ 29ರ ಸಂಜೆ 5.30 ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾಡಳಿತ ಭವನ ಕೊಪ್ಪಳ ವಿಳಾಸಕ್ಕೆ ಸಲ್ಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!