ಅ.28 & ಅ.29ರಂದು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

Get real time updates directly on you device, subscribe now.

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ (ಮೇಲಾಟಗಳು) ಕ್ರೀಡಾಕೂಟ ಅಕ್ಟೋಬರ್ 28 ಮತ್ತು ಅ.29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಅ.28ರ ಬೆಳಿಗ್ಗೆ 10 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿವೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತರಿರುವರು. ಕೊಪ್ಪಳ ವಿಧಾನಸಭೆಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಶಾಸಕರುಗಳಾದ ಹಾಗೂ ಜಿ.ಜನಾರ್ಧನರಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ ನಮೋಶಿ, ಡಾ.ಚಂದ್ರಶೇಖರ ಬಿ ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬೀಸಾಬ ದೋಟಿಹಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಶ್ರೀನಿವಾಸ ಗುಪ್ತಾ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ರಾಮ್ ಎಲ್ ಅರಸಿದ್ಧಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮಣ್ಣನವರ ಹಾಗೂ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಣಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಹಾಗೂ ಸಹ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಭೋದಕೇತರ ನೌಕರರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!