೧೦ ಕಿಲೋಮೀಟರ್ ಗುಡ್ಡಗಾಡು ಓಟದಲ್ಲಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

Get real time updates directly on you device, subscribe now.

Koppal  :  ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನೀಯರು ದಿನಾಂಕ ೨೪.೧೦.೨೦೨೪ ರಂದು ಶರಣೇಶ್ವರಿ ರಶ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಕಲಬುರ್ಗಿ ಇಲ್ಲಿ ನಡೆದ ೨೦೨೪-೨೫ ನೇ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ೧೦ ಕಿಮೀ ಗುಡ್ಡಗಾಡು ಓಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು
ಸದರಿ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ತಂಡವು ದ್ವಿತೀಯ ಸ್ಥಾನವನ್ನುಗಳಿಸಿದೆ ಹಾಗೂ ಕು.ದೇವಮ್ಮ ಮತ್ತು ಕು.ಪವಿತ್ರ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಗುಡ್ಡಗಾಡು ಓಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಇವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಸದರಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲಿದ್ದಾರೆ
ಈ ವಿದ್ಯಾರ್ಥಿನಿಯರ ಸಾಧನೆಯನ್ನು ಮೆಚ್ಚಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಕೆ ಲಮಾಣಿ ಇವರು ಅಭಿನಂದಿಸಿದರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪ್ರದೀಪ್ ಕುಮಾರ್ ಯು ಇವರು ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿ ಅಂತರ್ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿಯೂ ಸಾಧನೆ ಮಾಡಲು ಹಾರೈಸಿದರು ಅದೇ ರೀತಿ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನೀಯರು ಶುಭ ಹಾರೈಸಿದರು

Get real time updates directly on you device, subscribe now.

Comments are closed.

error: Content is protected !!