ಅ.29ರಂದು ಕೊಪ್ಪಳದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಿಮಿತ್ತ ಜಾಥಾ ಹಾಗೂ ವೆದಿಕೆ ಕಾರ್ಯಕ್ರಮವನ್ನು ಅಕ್ಟೋಬರ್ 29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ.
2024-25 ನೇ ಸಾಲಿಗೆ ಅಕ್ಟೋಬರ್ 29ರಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು “ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆ” ಹಾಗೂ ” ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲು ಆಯುಷ್ ಮಂತ್ರಾಲಯವು ನಿರ್ಧರಿಸುದರಿಂದ ರಾಜ್ಯಾದ್ಯಂತ ಆಯುರ್ವೇದ ಬಗ್ಗೆ, ವ್ಯಾಪಕ ಪ್ರಚಾರ ನೀಡಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಇದಕ್ಕೆ ಸಂಬಂಧಿಸಿದ ಸುತ್ತೋಲೆ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಅ.29ರ 08:30 ಗಂಟೆಗೆ ಕೊಪ್ಪಳ ತಾಲ್ಲೂಕು ಕ್ರೀಡಾಂಗಣದಿಂದ ಗಂಜ್ ಸರ್ಕಲ್ ಮೂಲಕ ಜಿಲ್ಲಾಡಳಿತ ಭವನದವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾ ಮುಗಿದ ನಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ಸರ್ವ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಲು ಕೊಪ್ಪಳ ಜಿಲ್ಲಾ ಆಯುಷ್ ಅಧಿಕಾರಿ ಡಾ ಪರ್ವತಗೌಡ ಬ. ಹಿರೇಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.