ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ: ಸಿಎಂ

0

Get real time updates directly on you device, subscribe now.

ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ

ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ: ಖಂಡಿತಾ ಸಹಾಯ ಮಾಡ್ತೀನಿ: ಸಿ.ಎಂ

ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ: ಸಿಎಂ

ಬೆಂಗಳೂರು ಅ 27:
ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

 

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಉದ್ಘಾಟಿಸಿ ಹಳ್ಳಿಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.

ಜಾತಿ ತಾರತಮ್ಯದ ವ್ಯವಸ್ಥೆಯಲ್ಲಿ ಶಿಕ್ಷಣ ಇಲ್ಲದಿದ್ದರೆ ಸಮಾಜದ ಮುಖ್ಯವಾಹಿನಿಯಲ್ಲಿ ಸಮರ್ಥವಾಗಿರುವುದು ಕಷ್ಟ.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಸಮಾಜದಲ್ಲಿ ಯಾವ್ಯಾವ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಜಾತಿ ಸಮೀಕ್ಷಾ ವರದಿಗಳು ಮುಖ್ಯ. 2011 ರಲ್ಲಿ ಜನಗಣತಿಯೇ ಕೊನೆ ಗಣತಿ. ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ ಎಂದರು.

ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ. ಆದ್ದರಿಂದ ಶಾಶ್ವತ ಹಿಂದುಳಿದ ಆಯೋಗಕ್ಕೆ ನಿಮ್ಮ ಬೇಡಿಕೆ ಕಳುಹಿಸಿ ಅಧ್ಯಯನ ಮಾಡಿಸಿ ವರದಿ ಪಡೆಯಲಾಗುವುದು. ಆ ಬಳಿಕ ಸಮುದಾಯಕ್ಕೆ ನ್ಯಾಯಯುತವಾಗಿ ಏನು ಸಲ್ಲಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದರು.

ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, ಡಿ.ಸುಧಾಕರ್, ಮಾಜಿ ಸಚಿವರಾದ ಶಾಸಕ ಎಸ್ ಟಿ ಸೋಮಶೇಖರ್, ಬೆಂ.ಕೃಷ್ಣಪ್ಪ, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!