ಬೆಂಬಲ ಬೆಲೆ ಯೋಜನೆ: ಶೇಂಗಾ ಖರೀದಿ ಕೇಂದ್ರಗಳ ಪ್ರಾರಂಭ
ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಶೇಂಗಾ ಉತ್ಪನ್ನ ಖರೀದಿಸುವ ಸಂಬAಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 6783 ಗಳಂತೆ ಎಕರೆಗೆ 03 ಕ್ವಿಂಟಾಲ್‌ನAತೆ ಒಬ್ಬ ರೈತರಿಂದ ಗರಿಷ್ಠ 15 ಕ್ವಿಂಟಲ್‌ರAತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಅಕ್ಟೋಬರ್ 28ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆಯನ್ನು ಜರುಗಿಸಿ, ಕೊಪ್ಪಳ ತಾಲೂಕಿನ ಅಳವಂಡಿ, ಮುದ್ದೆಬಳ್ಳಿ, ಕುಕನೂರು ತಾಲೂಕಿನ ಬೇವೂರಿನಲ್ಲಿ ಶೇಂಗಾ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
ನೋಡಲ್ ಅಧಿಕಾರಿಗಳ ವಿವರ: ಶೇಂಗಾ ಖರೀದಿ ಕೇಂದ್ರಗಳಾದ ಅಳವಂಡಿ, ಮುದ್ದೆಬಳ್ಳಿ ಖರೀದಿ ಕೇಂದ್ರಕ್ಕೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ಹಾಗೂ ಬೇವೂರು ಖರೀದಿ ಕೇಂದ್ರಕ್ಕೆ ಯಲಬುರ್ಗಾ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ರೈತರು ಕಡ್ಡಾಯವಾಗಿ ಫ್ರೂಟ್ಸ್ ಐಡಿಯನ್ನು ಹೊಂದಿರಬೇಕು. ಪ್ರತಿ ಎಕರೆಗೆ ಗರಿಷ್ಠ 03 ಕ್ವಿಂಟಲ್‌ರAತೆ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಶೇಂಗಾ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾವನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು ವಿಭಾಗೀಯ ಕಚೇರಿ ಕೊಪ್ಪಳ ಮೊ.ಸಂ: 9739074040, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.