ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ: ಅವಧಿ ವಿಸ್ತರಣೆ
: ಕೊಪ್ಪಳ ವಿಶ್ವವಿದ್ಯಾಲಯದಿಂದ 2024-25ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾA. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ‘ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಪ್ರವೇಶಾತಿಯನ್ನು ಯುಯುಸಿಎಂಎಸ್ ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ನವೆಂಬರ್ 11ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿತ್ತು, ಈ ದಿನಾಂಕವನ್ನು ವಿಸ್ತರಿಸಲಾಗಿದ್ದು, ನ.11ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಯುಯುಸಿಎಂಎಸ್ ಪೋರ್ಟಲ್ (https://uuems karnataka.gov.in) ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಪ್ರತಿ ಜೊತೆಗೆ ಸಂಬAಧಪಟ್ಟ ದಾಖಲಾತಿಗಳ ನಕಲು ಪ್ರತಿಯನ್ನು ದೃಢೀಕರಿಸಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸಲ್ಲಿಸಬೇಕು.
ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬAಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.