ನವೆಂಬರ್ 01ರಂದು 69ನೇ ಕರ್ನಾಟಕ ರಾಜ್ಯೋತ್ಸವ
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರಿಂದ
ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ
ಜಿಲ್ಲಾಡಳಿತದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 01ರಂದು ಬೆಳಿಗ್ಗೆ 09 ಗಂಟೆಗೆ ನಗರದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ ಪಟೇಲ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ ಅವರು ಆಗಮಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ ಅವರು ಉಪಸ್ಥಿತರಿರುವರು.
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣದ ನಂತರ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದವರ ತಂಡದಿAದ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Comments are closed.