ಕರ್ನಾಟಕ ಸಂಭ್ರಮ-50 – ನ.01ರಂದು ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ
ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡದ ಮೊದಲ ಶಾಸನ “ಹಲ್ಮಿಡಿ ಶಾಸನ”ದ ಪ್ರತಿಕೃತಿ ಪ್ರತಿಷ್ಠಾಪನೆ ಕಾರ್ಯಕ್ರಮವ ನವೆಂಬರ್ 01ರಂದು ಬೆಳಿಗ್ಗೆ 08.30ಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ ಅನಾವರಣಗೊಳಿಸುವರು. ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.