ಅಲ್ಪಸಂಖ್ಯಾತರಿಗೆ ಪಿ.ಎಂ. ಹೊಸ 15 ಅಂಶಗಳ ಕಾರ್ಯಕ್ರಮದಡಿ ಪ್ರಗತಿ ಪರಿಶೀಲನೆ
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 02ನೇ ತ್ರೈಮಾಸಿಕ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಸಮುದಾಯದವರ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಅಲ್ಪಸಂಖ್ಯಾತರಾದ ಮುಸ್ಲಿಂ, ಬೌದ್ಧ, ಜೈನ್, ಕ್ರಿಶ್ಚಿಯನ್, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ಇಲಾಖಾವಾರು ಇರುವ ಸೌಲಭ್ಯಗಳನ್ನು ಒದಗಿsಸಿ. ಕೃಷಿ, ತೋಟಗಾರಿಕೆ, ಪಶು, ರೇಷ್ಮೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿ ಮುಂತಾದ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ವಿವಿಧ ಯೋಜನೆಗಳಿದ್ದು, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಸರ್ಕಾರ ನಿಗದಿಪಡಿಸಿದ ಶೇಕಡಾವಾರು ಮೀಸಲಾತಿಗೆ ತಕ್ಕಂತೆ ಅರ್ಹರಿಗೆ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
*ನೂತನ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ:* ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಕೊಪ್ಪಳ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಮಾದಿನೂರಿನ ಪ್ರಶಾಂತ ಸುಬ್ಬಣ್ಣ ದೇಸಾಯಿ, ಕುಷ್ಟಗಿಯ ಮೊಹ್ಮದ್ ನಜೀರದ್ದೀನ್ ಎ ಮೂಲಿಮನಿ, ಕೊಪ್ಪಳ ನಗರದ ಮೇಹಬೂಬ ಪಾಶಾ ಎಂ ಮಾನ್ವಿ, ಕಾರಟಗಿಯ ಸಮೀನಾಬೇಗಂ ಮಹೆಬೂಪಾಷಾ, ಯರಡೋಣ ಗ್ರಾಮದ ಎಮ್ ಮದರವಲಿ ಸಾಬ ಆರ್. ಹಾಗೂ ಸಿದ್ದಾಪೂರದ ಎಂ.ಡಿ ಸಿರಾಜ್ ಹೆಚ್.ಎಸ್. ಅವರನ್ನು ಸರ್ಕಾರ ನಾಮ ನಿರ್ದೇಶನಗೊಳಿಸಿರುವ ಪ್ರಯುಕ್ತ ನೂತನ ಸಮಿತಿಯ ಸದಸ್ಯರಿಗೆ ಜಿಲ್ಲಾಧಿಕಾರಿಗಳಿಂದ ಪ್ರಮಾಣ ಪತ್ರ ವಿತರನೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೊಕರೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಕೊಪ್ಪಳ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿಯ ಅಧಿಕಾರೇತರ ಸದಸ್ಯರು ಉಪಸ್ಥಿತರಿದ್ದರು.