ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆಯ ಕಾರ್ಯಕ್ರಮವು ಅಕ್ಟೋಬರ್ 29 ರಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.
ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಶಿವಾನಂದ್ ಮಾತನಾಡಿ ಇತ್ತೀಚಿನ ದಿನಮಾನಗಳಲ್ಲಿ ಮೆದುಳಿನ ಆರೋಗ್ಯವು ತನ್ನದೇ ಆಗಿರುವಂತಹ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುತ್ತದೆ ಅಲ್ಲದೆ ಇತ್ತೀಚಿನ ಜನಗಳಲ್ಲಿ ಪಾರ್ಶ್ವವಾಯು ಒಂದು ಅಪಾಯಕಾರಿ ಆದಂತಹ ಮೆದುಳಿನ ಅನಾರೋಗ್ಯವಾಗಿ ಕಾಡುತ್ತಿದೆ ಜನರು ಇದರ ಬಗ್ಗೆ ನಿರ್ಲಕ್ಷ ತೋರದೆ ಸೂಕ್ತ ಸಮಯದಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡು ತಮ್ಮ ಅಮೂಲ್ಯವಾದ ಜೀವನವನ್ನು ಉಳಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಇನ್ನೀತರರು ಉಪಸ್ಥಿತರಿದ್ದರು.
Comments are closed.