ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸಂಭ್ರಮ-50ರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ
69ನೇ ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮದ ಸಮಾರೋಪದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾಗಿರುವ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ತಲಾ 50 ಪುರುಷ ಮತ್ತು ಮಹಿಳೆ ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ನಾಗರಾಜ್ ಯಾದವ್, ಪ್ರಕಾಶ್ ರಾಥೋಡ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ್ ಬಿಳಿಮಲೆ ಹಾಗೂ ಇನ್ನಿತರರಿದ್ದರು.
Comments are closed.