ಕನ್ನಡದ ನಂದಾದೀಪ ಬೆಳಗಲಿ-ಪ್ರೊ. ಕೆ.ವಿ.ಪ್ರಸಾದ್

Get real time updates directly on you device, subscribe now.

ಕೊಪ್ಪಳ : ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು.
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ನಾಡ ದೇವತೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮೂಲಕ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ನಮ್ಮಿಂದಲೇ ಆಗಬೇಕಿದೆ ಎಂದರು.
ಕನ್ನಡ ವಿಭಾಗದ ಉಪನ್ಯಾಸಕ ಪ್ರವೀಣ ಪೊಲೀಸ ಪಾಟೀಲ ಮಾತನಾಡಿ ದಿನನಿತ್ಯ ಜೀವನದಲ್ಲಿ ಕನ್ನಡ ಬಳಕೆ ಮಾಡುವ ಮೂಲಕ ಪ್ರತಿದಿನವೂ ರಾಜ್ಯೋತ್ಸವವನ್ನು ಆಚರಣೆ ಮಾಡೋಣ ಎಂದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಯ್ಯಪ್ಪ, ಪಾರ್ವತಿ ಹಾಗೂ ಸಂತೋಷಕುಮಾರ ಹೆಚ್ ಕೆ, ಶ್ರೀಕಾಂತ್, ವಿರುಪಾಕ್ಷಿ, ದೇವರಾಜ್ ಬಡಿಗೇರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!