ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಸಮಾರಂಭ

Get real time updates directly on you device, subscribe now.

ಕೊಪ್ಪಳ, ೧: ನಗರದ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಪರಮೇಶ್ವರಪ್ಪ ಕೊಪ್ಪಳರವರು ಭುವನೇಶ್ವರಿದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣವನ್ನು ನೆರವೇರಿಸಿ, ರಾಜ್ಯೋತ್ಸ್ಸವದ ಕುರಿತಾಗಿ ಮಾತನಾಡಿದರು. ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ೬೯ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ನಮ್ಮ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೋಂಡಿದ್ದರು.

ಈ ರಾಜ್ಯೋತ್ಸವ ಸಮಾರಂಭಕ್ಕೆ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಪರಮೇಶ್ವರಪ್ಪ ಕೊಪ್ಪಳರವರು ಮತ್ತು ಶಾಲಾ ಆಢಳಿತ ಮಂಡಳಿಯ ಕಾರ್ಯದರ್ಶಿಗಳಾದ ಲಯನ್ ಗವಿಸಿದ್ದಪ್ಪ ಮುದಗಲ್ ಮತ್ತು ಲಯನ್ಸ್ ಕ್ಲಬ್‌ನ ಎಲ್ಲ ಪದಾಧಿಕಾರಿಗಳು ಹಾಗೂ ಶಾಲಾ ಪ್ರಾಚಾರ್ಯರಾದ ಶ್ರೀಮತಿ ವೈ. ಪದ್ಮಜಾರೊಂದಿಗೆ ಎಲ್ಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

Get real time updates directly on you device, subscribe now.

Comments are closed.

error: Content is protected !!