ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ : ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರಬೇಕು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ತರಬೇತಿ ಅವಧಿ ವೇಳೆ ಮಾಸಿಕ 15,000ರೂ.ಗಳ ತರಬೇತಿ ಭತ್ಯ ನೀಡಲಾಗುತ್ತದೆ. ಅವಧಿ ಒಂದು ವರ್ಷದ್ದಾಗಿದೆ (ಜನವರಿ 2025 ರಿಂದ ಡಿಸೆಂಬರ್ 2025). ಅಭ್ಯರ್ಥಿಗಳು 35ವರ್ಷದ ಒಳಗೆ ಇರಬೇಕು. ಆಸಕ್ತರು ಅರ್ಜಿಯನ್ನು ಇದೇ 2024ರ ನವೆಂಬರ್ 05 ರಿಂದ ನ.21 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ; +919480841245, 8277462995 ಹಾಗೂ 81509 20986 ಗೆ ಸಂಪರ್ಕಿಸುವಂತೆ ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.