ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ
): ಕೃಷಿ ಇಲಾಖೆಯಿಂದ 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನಾಂಕವಾಗಿದೆ. ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತ ರೈತ ಮತ್ತು ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೃಷಿ ಪ್ರಶಸ್ತಿ ಮಾರ್ಗಸೂಚಿಯ ಮಾನದಂಡಗಳ ಪ್ರಕಾರ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅರ್ಹರಾಗಲು ಪುರುಷರ ವಿಭಾಗದಲ್ಲಿ ಕನಿಷ್ಟ 15 ಮತ್ತು ಮಹಿಳೆಯರ ವಿಭಾಗದಲ್ಲಿ ಕನಿಷ್ಟ 07 ಅರ್ಜಿಗಳ ನೋಂದಣಿ ಕಡ್ಡಾಯವಾಗಿರುತ್ತದೆ. ಈ ಅವಕಾಶವನ್ನು ಜಿಲ್ಲೆಯ ಎಲ್ಲಾ ರೈತರು ಸದುಪಯೋಗಪಡಿಸಿಕೊಳ್ಳಬೇಕು. ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಮಳೆಯಾಶ್ರಿತ ಕಡಲೆ ಮತ್ತು ಜೋಳವನ್ನು ಹಿಂಗಾರು ಹಂಗಾಮಿನ ಬೆಳೆಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.