ಜಿಲ್ಲಾ ಮಟ್ಟದ ಯುವಜನೋತ್ಸವ: ಹೆಸರು ನೋಂದಾಯಿಸಲು ಸೂಚನೆ

0

Get real time updates directly on you device, subscribe now.

  ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಬಾಗವಹಿಸಲಿಚ್ಛೀಸುವವರು ತಮ್ಮ ಹೆಸರನ್ನು ನೋಂದಾಯಿಸಬೇಕು.
ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟ್ರ ಮಟ್ಟದ ಯುವಜನೋತ್ಸವವನ್ನು ಪ್ರತಿ ವರ್ಷ ಜನವರಿ ಮಾಹೆಯಲ್ಲಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಜೇತ ಸ್ಪರ್ಧಾಳುಗಳ ತಂಡವನ್ನು ಕಳುಹಿಸುವ ಸಲುವಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಸಂಘಟಿಸಬೇಕಾಗಿದ್ದು, ಅದರಂತೆ 2024-25ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 08ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು 15 ರಿಂದ 29ವರ್ಷ ವಯೋಮಾನದೊಳಗಿನ ಯುವಜನರನ್ನು ಮಾತ್ರ ಸಂಬಂಧಿಸಿದ ದಾಖಲೆಗಳನ್ನು ಆಧರಿಸಿ ಪರಿಗಣಿಸಲಾಗುವುದು. ಸದರಿ ಕಾರ್ಯಕ್ರಮವು ಮುಕ್ತವಾಗಿ ಮೇಲೆ ತಿಳಿಸಿದ ವಯೋಮಿತಿಯೊಳಗಿನ ಯುವಜನರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
*ಸ್ಪರ್ಧೆಗಳ ವಿವರ:* ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವೀನ್ಯತೆ ವಿಷಯಾಧಾರಿತ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ತಂಡ ಹಾಗೂ ವೈಯಕ್ತಿಕ ಜನಪದ ನೃತ್ಯ, ಜನಪದ ಗೀತೆ, ಜೀವನ ಕೌಶಲ್ಯ ವಿಭಾಗದಲ್ಲಿ ಕನ್ನಡ, ಆಂಗ್ಲ, ಹಿಂದಿ ಭಾಷೆಯಲ್ಲಿ ಕವಿತೆ (1000 ಪದಗಳಿಗೆ ಮೀರದಂತೆ) ಬರೆಯುವ ಮತ್ತು ಕಥೆ ಬರೆಯುವ ವೈಯಕ್ತಿಕ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆ. ಇದಲ್ಲದೇ ಆಯ್ದ ವಿಷಯಗಳ ಬಗ್ಗೆ 3 ನಿಮಿಷಗಳ (ರಾಷ್ಟ್ರ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಕನ್ನಡ ಭಾಷೆಯನ್ನು ಮಾತ್ರ ಸೀಮಿತಗೊಳಿಸಿದೆ) ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.08ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, 15 ರಿಂದ 29 ವರ್ಷ ವಯೋಮೊತಿಯೊಳಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಳ್ಳಬಹುದು. ಭಾಗವಹಿಸುವ ಆಸಕ್ತು ನ.08ರ ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಆಧಾರ ಕಾರ್ಡ್ ಮತ್ತು ಬ್ಯಾಂಕ್ ಪುಸ್ತಕದ ನಕಲು ಪ್ರತಿಯೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕ್ರೀಡಾ ಇಲಾಖೆ ದ್ವಿ.ದ.ಸ ಬಿ.ಕೀರ್ತಿವರ್ಧನ ಮೊ.ಸಂ: 7676343554 ಮತ್ತು ಹನುಮೇಶ ಮೊ.ಸಂ: 7676810372ಗೆ ಸಂಪರ್ಕಿಸಬಹುದಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!