ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ: ಆಟೋ ಜಾಥಕ್ಕೆ ಚಾಲನೆ

0

Get real time updates directly on you device, subscribe now.

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಪ್ಯಾನ್-ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಅಭಿಯಾನ ಕಾರ್ಯಕ್ರಮ “ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ” ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ ಕಾರ್ಯಕ್ರಮದ ಆಟೋ ಜಾಥಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ, ಕೊಪ್ಪಳ ಜಿಲ್ಲಾಧಿಕಾರಿಗಳು, ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ, ಮಕ್ಕಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆ ಹಾಗೂ ಹಠಾತ್ ದಾಳಿಗಳನ್ನು ನಡೆಸಲು ಸೂಚಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆಟೋ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ ಕಣವಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕಾರ್ಮಿಕ ನಿರೀಕ್ಷಕ ಶಿವಶಂಕರ್ ತಳವಾರ ಸೇರಿದಂತೆ ವಕೀಲರು, ಮಕ್ಕಳ ಸಹಾಯವಾಣಿ-1098 ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
*ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆ, ಜಾಗೃತಿ:* ಕಾರ್ಯಕ್ರಮದ ಬಳಿಕ ಕೊಪ್ಪಳ ನಗರದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆಯನ್ನು ಕೈಗೊಳ್ಳಲಾಯಿತು. 18 ವರ್ಷದ ಒಳಗಿನ ಯಾವುದೇ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸಾರ್ವಜನಿಕರಲ್ಲಿ ಕರಪತ್ರಗಳನ್ನು ಹಂಚಿ ಬಿತ್ತಿ ಪತ್ರಗಳನ್ನು ಅಂಟಿಸುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

Get real time updates directly on you device, subscribe now.

Leave A Reply

Your email address will not be published.

error: Content is protected !!