ಸೇನೆ, ಯುನಿಫಾರ್ಮ್ ಸೇವೆಗೆ ಪೂರ್ವ ಸಿದ್ದತೆ ತರಬೇತಿಗೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2ಎ, 3ಎ, 3ಬಿ ಗಳಿಗೆ ರೂ 1 ಲಕ್ಷಗಳಿರಬೇಕು. ಕನಿಷ್ಟ ವಿದ್ಯಾರ್ಹತೆ ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಈ ಸಮಾನವಾದ ಗ್ರೇಡ್ ಪಡೆದಿರಬೇಕು. ವಯೋಮಿತಿ ಅಕ್ಟೋಬರ್ 30, 2024ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸುನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 30 ಅಕ್ಟೋಬರ್ 2004 ರಿಂದ 30 ಅಕ್ಟೋಬರ್ 2007 ರ ದಿನಾಂಕಗಳ ನಡುವೆ ಜನಸಿರಬೇಕು.
ತರಬೇತಿ ನೀಡುವ ಸ್ಥಳಗಳು: ತರಬೇತಿಯನ್ನು ಜಿಲ್ಲೆಯ ಸೇನಾ ಅಯ್ಕೆ ಪೂರ್ವ ತರಬೇತಿ ಕೇಂದ್ರ ಕನಕಗಿರಿಯಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಕೊಪ್ಪಳ ಇಲ್ಲಿ ಅರ್ಜಿ ಪಡೆದು ಖುದ್ದಾಗಿ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 08539221606 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.