ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ನವೆಂಬರ್ 11ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಒನಕೆ ಓಬವ್ಬ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಪ್ಪಾರ್ಚನೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಓನಕೆ ಓಬವ್ವ ಸಮಾಜದ ಮುಖಂಡರು ಉಪಸ್ಥಿತರಿರಬೇಕೆಂದು ಹೇಳಿದರು.
ಅಂದು ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರಕಾರಿ ಕಛೇರಿಗಳಲ್ಲಿ ವೀರವನಿತೆ ಒನಕೆ ಓಬವ್ಬ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಯಂತಿ ಆಚರಣೆ ಕುರಿತು ಜನ ಪ್ರತಿನಿಧಿಗಳಿಗೂ ಮಾಹಿತಿ ನೀಡಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಸಮಾಜದ ಮುಖಂಡರು ಜಯಂತಿ ಆಚರಣೆ ಕುರಿತು ತಮ್ಮ ಸಲಹೆ ಸೂಚನೆಗಳನ್ನು ನೀಡಿ ಎಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ನಗರಸಭೆ ಅಧಿಕಾರಿ ರಾಘವೇಂದ್ರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಚಲವಾದಿ ಸಮಾಜದ ಜಿಲ್ಲಾಧ್ಯಕ್ಷರಾದ ಗವಿಸಿದ್ದಪ್ಪ ಬೆಲ್ಲದ, ಖಜಾಂಚಿ ಹಣಮಂತಪ್ಪ ಬಂಗಾಳಿಗಿಡ. ಸದಸ್ಯರಾದ ಅನಿಲಕುಮಾರ ಬೇಗಾರ. ಕಾಶಪ್ಪ ಚಲವಾದಿ ಸೇರಿದಂತೆ ಇತರೆ ಸಮಾಜದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.