ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ಶಸ್ತ್ರಗಳನ್ನು ಠೇವಣಿ ಮಾಡುವಂತೆ ಸೂಚನೆ

Get real time updates directly on you device, subscribe now.

ವಿವಿಧ ಕಾರಣಗಳಿಂದ ತೆರವಾಗಿರುವ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ನಡೆಯಲಿದ್ದು, ಶಸ್ತ್ರಗಳನ್ನು ಪೊಲೀಸ್ ಇಲಾಖೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶಿಸಿದ್ದಾರೆ.

ನವೆಂಬರ್ 04 ರಿಂದ ನ.26ರ ವರೆಗೆ ಕೊಪ್ಪಳ ನಗರಸಭೆಯ ವಾರ್ಡ ಸಂಖ್ಯೆ 8ರ ಮತ್ತು 11 ಹಾಗೂ ಕಾರಟಗಿ ಪುರಸಭೆಯ ವಾರ್ಡ ಸಂಖ್ಯೆ 21 ಒಳಗೊಂಡಂತೆ ಕೊಪ್ಪಳ ಜಿಲ್ಲೆಯ ಈ ಎರಡು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಉಪ ಚುನಾವಣೆ ನಡೆಯುವದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಠಿಯಿಂದ, ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ ವ್ಯಾಪ್ತಿಗಳಲ್ಲಿ ರೈತರು, ಗಣ್ಯವ್ಯಕ್ತಿಗಳು ಮತ್ತು ಇತರರು ಹೊಂದಿರುವ ಶಸ್ತ್ರಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವುದು ಅತೀ ಅವಶ್ಯಕವೆಂದು ಕಂಡುಬಂದ ಶಸ್ತ್ರಾಸ್ತ್ರಗಳ ಅಧಿನಿಯಮ, 1959 ಕಲಂ 21, 24ಎ ಮತ್ತು 24ಬಿರ ಪ್ರಕಾರ ಕೊಪ್ಪಳ ಜಿಲ್ಲೆಯ ಕೊಪ್ಪಳ ಹಾಗೂ ಕಾರಟಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವ ಶಸ್ತ್ರಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಮತ್ತು ನಿಗದಿತ ಅವಧಿಯೊಳಗೆ ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡದೇ ಇರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 223ರನ್ವಯ ಕ್ರಮ ಕೈಗೊಳ್ಳುವಂತೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದ ನಂತರ ನಿಯಮಾನುಸಾರ ಪರವಾನಿಗೆದಾರರ ವಶಕ್ಕೆ ನೀಡಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ಇವರಿಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!