ಪಾರದರ್ಶಕ, ಮಾರ್ಗಸೂಚಿ ಪ್ರಕಾರ ಯೋಜನೆಗಳ ಅನುಷ್ಠಾನವಾಗಲಿ: ರಾಹುಲ್ ರತ್ನಂ ಪಾಂಡೆಯ

0

Get real time updates directly on you device, subscribe now.

ಗ್ರಾಪಂ ಪಿಡಿಓಗಳು ಹಾಗೂ ಅಧ್ಯಕ್ಷರಿಗೆ ಕಾರ್ಯಾಗಾರದಲ್ಲಿ ಜಿ.ಪಂ. ಸಿಇಓ ಸೂಚನೆ
  ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾ.ಪಂ. ಪಿಡಿಓ ಹಾಗೂ ಅಧ್ಯಕ್ಷರ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ನಿರ್ಧಿಷ್ಟ ಗುರಿಯೊಂದಿಗೆ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಪಿಡಿಒಗಳು, ಅಧ್ಯಕ್ಷರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಸೂಚನೆ ನೀಡಿದರು.
ಅವರು ಜಿಲ್ಲಾ ಪಂಚಾಯತ್ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಲಾಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತ ಬೇಡಿಕೆಗೆ ಅನುಗುಣವಾಗಿ ಯೋಜನಾ ಅನುದಾನ ಕ್ರೋಢೀಕರಿಸಬೇಕು. ಗ್ರಾಮ ಪಂಚಾಯತ್ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸಲು ಸರಿಯಾದ ಯೋಜನೆ ರೂಪಿಸುವುದು. ಕೇಂದ್ರ & ರಾಜ್ಯ ಪುರಸ್ಕೃತ ಯೋಜನೆಯ ಅನುಷ್ಟಾನಗೊಳ್ಳುವ ಕಾಮಗಾರಿಗಳನ್ನು ಹಂತಹಂತವಾಗಿ ಪರಿಶೀಲಿಸಿ, ಮೇಲ್ವಿಚಾರಣೆ ನಡೆಸಬೇಕು ಎಂದರು.
ಗ್ರಾಮ ಪಂಚಾಯತ್ ವಾರ್ಷಿಕ ಅಭಿವೃದ್ಧಿ ಯೋಜನೆಯನ್ನು ಮುಂದಾಲೋನೆ ದೃಷ್ಟಿಯಲ್ಲಿ ಸಿದ್ಧಪಡಿಬೇಕು. ಪ್ರತಿಯೊಂದು ಯೋಜನೆಗಳ ಅನುಷ್ಠಾನದ ವೇಳಾಪಟ್ಟಿ ತಯಾರಿ ಮಾಡಿಕೊಳ್ಳಬೇಕು. ಕ್ರಿಯಾ ಯೋಜನೆಗೆ ಅನುಗುಣವಾಗಿ ಭೌತಿಕ ಗುರಿ, ಅನುದಾನದ ಹಂಚಿಕೆ ಮತ್ತು ಮಾರ್ಗಸೂಚಿಗಳಂತೆ ಅನುಷ್ಠಾನ ಮಾಡಬೇಕು. ಗ್ರಾಮ ಪಂಚಾಯತಿ ಸಾಮಾನ್ಯ ಮಾಹಿತಿ ಮತ್ತು ಕುಟುಂಬ ಸಮೀಕ್ಷೆಯ ವರದಿ ಸಿದ್ದಪಡಿಸಿಟ್ಟುಕೊಂಡು ಗ್ರಾಮಸ್ಥರ ಮಾಹಿತಿಗೆ ಪ್ರದರ್ಶಿಸಬೇಕು. ಕುಂದುಕೊರತೆಗಳ ಪರಿಹಾರಕ್ಕಾಗಿ ಗ್ರಾಪಂ ಹಂತದಲ್ಲೇ ಆಂತರಿಕ ಕಾರ್ಯ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು.
ಪೋಸ್ಟರ್ ಬಿಡುಗಡೆ: ಉದ್ಯೋಗ ಖಾತರಿ ಯೋಜನೆ ಜಾಗೃತಿ ಪೋಸ್ಟರ್ ಹಾಗೂ ಜೆಜೆಎಂ ಪೋಸ್ಟರ್ ಅನ್ನು ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಬಿಡುಗಡೆಗೊಳಿಸಿದರು. ಕೆ.ಹೆಚ್.ಪಿ.ಟಿ ಯೋಜನೆಯಿಂದ ಪಿಡಿಓ ಮತ್ತು ಅಧ್ಯಕ್ಷರಿಗೆ ಗ್ರಾಮ ಆರೋಗ್ಯ ಕಿಟ್ ವಿತರಿಸಿದರು.
ಈ ಕಾಯಾಗಾರದಲ್ಲಿ ತಾಲೂಕಿನ ಆಯ್ದ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ‘ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಂಡ ಯೋಜನೆಗಳು ಮತ್ತು ಅಭಿವೃದ್ಧಿ ಮುನ್ನೋಟಗಳ ಬಗ್ಗೆ’ ಪ್ರಸ್ತುತ ಪಡಿಸಿದರು. ನಂತರ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೇಲೋ ರವರು ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ & ಕೂಸಿನ ಮನೆ ನಿರ್ವಹಣೆಯ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೋದಲಬಾಗಿ, ಜಿ.ಪಂ. ಯೋಜನಾ ನಿರ್ದೇಶಕ ಪ್ರಕಾಶ್ ವಡ್ಡರ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಪಂ.ರಾ), ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಎಲ್ಲಾ ಯೋಜನೆಗಳ ಜಿಲ್ಲಾ ಸಂಯೋಜಕರು ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೇಲೋ ಸಂಯೋಜಕರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!