ಸಂಡೂರು ಪ್ರಚಾರಕ್ಕೆ ಎಂ.ಡಿ ಆಸೀಫ್ ಹುಸೇನ್ ನೇಮಕ ನೇಮಕ
ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಡಿ ಆಸೀಫ್ ಹುಸೇನ್ ಇವರನ್ನು ಸಂಡೂರು ಉಪಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳುವ ಸಲುವಾಗಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಿಯೋಜನೆಗೊಂಡಿದ್ದಾರೆ.
ಇತ್ತೀಚೆಗೆ ರಾಜ್ಯ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದು ಪಕ್ಷವು ಇವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿದೆ. ಇಂತಹ ಉತ್ತಮ ಅವಕಾಶ ನೀಡಿದ್ದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಚಂದ್ರಶೇಖರ್, ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿವಿ ಶ್ರೀನಿವಾಸ ರಾಜ್ಯ ಯುವ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಮಂಜುನಾಥ್ ಇವರ ಸಹಕಾರವನ್ನು ಸ್ಮರಿಸಿದ ಆಸೀಫಲಿಯವರು, ಪಕ್ಷ ನೀಡಿದ ಜವಬ್ದಾರಿಯನ್ನು ಅತ್ಯಂತ ಶ್ರದ್ಧೆಯಿಂದ ಪಾಲಿಸುತ್ತೇನೆ. ನೀತಿ ನಿಯಮಗಳಿಗೆ ಕಟಿಬದ್ಧನಾಗಿ ಹಗಲಿರುಳು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.
Comments are closed.