ಕೊಪ್ಪಳ ವಿವಿ: ತಾಂತ್ರಿಕ ಸಮಸ್ಯೆ ಪರಿಹಾರ
: ಕೊಪ್ಪಳ ವಿಶ್ವವಿದ್ಯಾಲಯದಿಂದ 2024-2025ನೇ ಶೈಕ್ಷಣಿಕ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾA. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನದ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನೇತರ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶಾತಿಗಾಗಿ ಯುಯುಸಿಎಂಎಸ್ ತಂತ್ರಾAಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಯುಯುಸಿಎಂಎಸ್ ನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯನ್ನು ವಿಶ್ವವಿದ್ಯಾಲಯವು ಪರಿಹರಿಸಿದೆ.
ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಯುಯುಸಿಎಂಎಸ್ (https://uucms.karnataka.gov. in/) ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬAಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ಕಾಲೇಜುಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.