ನ.09 ರಿಂದ ಜಿಲ್ಲಾಡಳಿತದಿಂದ ವಿಶೇಷ ಅಭಿಯಾನ: ಸದುಪಯೋಗಕ್ಕೆ ಮನವಿ ಮತದಾರರ ಪಟ್ಟಿ ಪರಿಷ್ಕರಣೆ voters list

Get real time updates directly on you device, subscribe now.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2025 ರ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದಿಂದ ವಿಶೇಷ ಅಭಿಯಾನವನ್ನು ನ.09 ರಿಂದ ನ.24ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರದಂದು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ
 ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2025ರ ಸಂಬAಧ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಮತ್ತು 64-ಕೊಪ್ಪಳ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಗಳನ್ನು ಅಕ್ಟೋಬರ್ 29 ರಂದು ಪ್ರಕಟಿಸಲಾಗಿದೆೆ.
ವಿಶೇಷ ಅಭಿಯಾನ ವಿವರ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವಿಶೇಷ ಅಭಿಯಾನವು ನ.09, 10, 23 ಹಾಗೂ ನ.24 ರಂದು ನಡೆಯಲಿದ್ದು, ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಉಪಸ್ಥಿತರಿರುತ್ತಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಅಭಿಯಾನದಲ್ಲಿ ಪಾಲ್ಗೊಂಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ಮಾರ್ಪಾಡು, ಬದಲಾವಣೆ ಹಾಗೂ ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಈ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!